ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ –ಸಮವಸ್ತ್ರ ವಿತರಣೆ

0
32

ಮಾಣಿ : ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಏಮಾಜೆಯ ಎಲ್‌ಕೆಜಿ ಹಾಗೂ ಯುಕೆಜಿ ಮಕ್ಕಳಿಗೆ ಉಚಿತ ಸಮವಸ್ತ್ರಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಯುವವಾಹಿನಿ (ರಿ.) ಮಾಣಿ ಘಟಕದ ಅಧ್ಯಕ್ಷರಾದ ಗಣೇಶ್ ಪೂಜಾರಿ ಕೊಡಾಜೆ, ಮಾಜಿ ಅಧ್ಯಕ್ಷರಾದ ಹರೀಶ್ ಪೂಜಾರಿ ಬಾಕಿಲ, ಕಲೆ ಮತ್ತು ಸಾಹಿತ್ಯ ನಿರ್ದೇಶಕರಾದ ರಾಜೇಶ್ ಕೋಟ್ಯಾನ್, ಸಂಘಟನಾ ಕಾರ್ಯದರ್ಶಿ ಮೋಹನ್ ಮುಜಾಲ, ಸುಜೀತ್ ಬಾಕಿಲ ಹಾಗೂ ಸದಸ್ಯರಾದ ನಿಶಾಂತ್, ವಸಂತಿಕೃಷ್ಣಪ್ಪ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳ ಮೇಲಿನ ಅಭಿಮಾನ ಹಾಗೂ ಕಾಳಜಿಯಿಂದ ಸಂಘಟನಾ ಕಾರ್ಯದರ್ಶಿ ಸುಚಿತ್ ಅಂಚನ್ ಅವರು ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಿಸುವ ಕಾರ್ಯಕ್ಕೆ ಆರ್ಥಿಕ ಸಹಕಾರ ನೀಡಿದರು. ಸಮವಸ್ತ್ರಗಳ ವೆಚ್ಚವನ್ನು ಭರಿಸುವ ಮೂಲಕ ಅವರು ಈ ಸೇವಾ ಕಾರ್ಯಕ್ಕೆ ಕೈಜೋಡಿಸಿದರು.

ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಹಾಗೂ ವಿದ್ಯಾರ್ಥಿಗಳ ಅಗತ್ಯಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಈ ಸೇವಾ ಕಾರ್ಯವನ್ನು ಹಮ್ಮಿಕೊಳ್ಳಲಾಯಿತು. ಶಾಲಾ ಪರವಾಗಿ ಮುಖ್ಯ ಶಿಕ್ಷಕಿ ಡಾ. ತ್ರಿವೇಣಿ ರಮೇಶ್ ಶುಭ ಹಾರೈಸಿದರು.