
ಉಡುಪಿ : ವಿದ್ಯಾವಾಚಸ್ಪತಿ ಡಾ. ಬನ್ನಂಜೆ ಗೋವಿಂದಾಚಾರ್ಯರ ಜೀವನಾಧಾರಿತ ‘ಇಂದು ಎನಗೆ ಗೋವಿಂದ’ ಚಲನಚಿತ್ರದ ಮೂರು ಉಚಿತ ಪ್ರದರ್ಶನಗಳು ಗುರುವಾರ ಉಡುಪಿಯ ಗೀತಾ ಮಂದಿರದ ನೃಸಿಂಹ ಸಭಾಂಗಣದಲ್ಲಿ ಪ್ರದರ್ಶನಗೊಂಡವು.
ಈ ಸಂದರ್ಭದಲ್ಲಿ ಬನ್ನಂಜೆ ಗೋವಿಂದಾಚಾರ್ಯ ಪ್ರತಿಷ್ಠಾನದ ಮುಖ್ಯಸ್ಥರಾದ ವೀಣಾ ಬನ್ನಂಜೆ ಅವರನ್ನು ಬನ್ನಂಜೆ ಅಭಿಮಾನಿ ಬಳಗ, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಹಾಗೂ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ವತಿಯಿಂದ ಗೌರವಿಸಲಾಯಿತು.
ಚಲನಚಿತ್ರದಲ್ಲಿ ಪ್ರದಾನ ಪಾತ್ರದಲ್ಲಿ ನಟಿಸಿದ ಭಾಸ್ಕರ್ ರಾವ್ ಹಾಗು ಕೃಷ್ಣರಾಜ್ ಭಟ್ ಕುತ್ಪಾಡಿಯವರನ್ನು ಅಭಿನಂದಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕ ವಿಶ್ವನಾಥ್ ಶೆಣೈ, ಬನ್ನಂಜೆ 90 ನಮನ ಕಾರ್ಯಕ್ರಮದ ಪ್ರಧಾನ ಕಾರ್ಯದರ್ಶಿ ಆಸ್ಟ್ರೋ ಮೋಹನ್, ಕಾರ್ಯದರ್ಶಿ ಜನಾರ್ದನ ಕೊಡವೂರು, ಕೋಶಾಧಿಕಾರಿ ಪ್ರೊ. ಸದಾಶಿವ ರಾವ್, ರಾಜೇಶ್ ಭಟ್ ಪಣಿಯಾಡಿ, ಪಂಚಮಿ ಟ್ರಸ್ಟಿನ ಮುಖ್ಯಸ್ಥ ಡಾ. ಎಂ. ಹರೀಶ್ಚಂದ್ರ, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ, ಗೌರವ ಕಾರ್ಯದರ್ಶಿ ರಂಜಿನಿ ವಸಂತ್, ಕೋಶಾಧಿಕಾರಿ ರಾಜೇಶ್ ಭಟ್ ಪಣಿಯಾಡಿ, ಸಾಂಸ್ಕೃತಿಕ ಕಾರ್ಯದರ್ಶಿ ವಸಂತ್, ದೀಪಾ ಕರ್ಕಿ, ಚಂದ್ರಕಾಂತ್ ಮತ್ತಿತರರು ಉಪಸ್ಥಿತರಿದ್ದರು.
ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲಾ ಮಹಿಳಾ ಪ್ರತಿನಿಧಿ ಪೂರ್ಣಿಮಾ ಜನಾರ್ದನ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
