ಸೆ.14-16: ವಿವೇಕಾನಂದ ಕಾಲೇಜಿನಲ್ಲಿ 45ನೇ ವರ್ಷದ ಗಣೇಶೋತ್ಸವ ಸಂಭ್ರಮ

0
8

ಪುತ್ತೂರು: ನೆಹರು ನಗರದ ವಿವೇಕಾನಂದ ವಿದ್ಯಾವರ್ಧಕ ಸಂಘ(ರಿ) ವತಿಯಿಂದ 45ನೇ ವರ್ಷದ ಗಣೇಶೋತ್ಸವ ಸಂಭ್ರಮ ಅದ್ದೂರಿಯಾಗಿ ನಡೆಯಲಿದೆ. ಇದರ ಅಂಗವಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ಕಾರ್ಯಚರಿಸುತ್ತಿರುವ ವಿವಿಧ ವಿದ್ಯಾಸಂಸ್ಥೆಗಳು ಜೊತೆಯಾಗಿ ಸೆ. 14 ರಿಂದ ಸೆ. 16ರ ವರೆಗೆ ಮೂರು ದಿನಗಳ ಕಾಲ ವಿಜೃಂಭಣೆಯಿಂದ ಗಣೇಶೋತ್ಸವವನ್ನು ಆಚರಿಸಲಿದೆ.

ಸೆ. 14 ರಂದು ಬೆಳಗ್ಗೆ ಶಿವಪೇಟೆಯಿಂದ ಮೆರವಣಿಗೆ ಮೂಲಕ ವಿಗ್ರಹವನ್ನು ತಂದು ವಿವೇಕಾನಂದ ಕ್ಯಾಂಪಸ್ ನ ಕೇಶವ ಸಂಕಲ್ಪ ಸಭಾಭವನದಲ್ಲಿ ಪ್ರತಿಷ್ಠಾಪಿಸಲಾಗುತ್ತದೆ. ವಿವೇಕಾನಂದ ವಿದ್ಯಾವರ್ಧಕ ಸಂಘದ ಹಿರಿಯ ನಿವೃತ್ತ ಉದ್ಯೋಗಿ ನಾರಾಯಣ ಕೆ ಇವರಿಂದ ಜ್ಯೋತಿ ಬೆಳಗಿಸಲಾಗುವುದು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಂಗ ಸಂಸ್ಥೆಗಳಿಂದ ಮೂರು ದಿನಗಳ ಕಾಲ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಜೊತೆಗೆ ಗ್ರಾಮಸ್ಥರಿಂದ ಭಜನೆ ಹಾಗೂ ರಂಗಪೂಜೆ ನಡೆಯಲಿದೆ. ವಿವೇಕಾನಂದ ಕಾಲೇಜಿನ ಅಧ್ಯಾಪಕರುಗಳ ನೇತೃತ್ವದಲ್ಲಿ ಗಣಹೋಮ, ಮಹಾಪೂಜೆ, ಪ್ರಸಾದ ವಿತರಣೆಯೊಂದಿಗೆ ವಿವಿಧ ಧಾರ್ಮಿಕ ಕಾರ್ಯಕ್ರಮ ಜರಗಲಿದೆ. ಸೆ.15ರ ಬೆಳಗ್ಗೆ ಗಣಪತಿ ಹವನ, ಸಂಸ್ಕೃತಿಕ ಕಾರ್ಯಕ್ರಮಗಳು, ಗಣೇಶೋತ್ಸವದ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿಯೂ ಕಾಲೇಜಿನ ವಿದ್ಯಾರ್ಥಿಗಳಿಗೆ ಆಯೋಜಿಸಿದ ಆಟೋಟ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮತ್ತು ಸಭಾ ಕಾರ್ಯಕ್ರಮ ನಡೆಯಲಿದೆ.