ಕಾಪುವಿನಲ್ಲಿ ‘ರಾಪಿಡೋ ಚೆಸ್ ಟೂರ್ನಮೆಂಟ್–2026’ಗೆ ಚಾಲನೆ

0
4

ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಸನ್ಮಾನ್ಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಪ್ರಯುಕ್ತ ಇಂದು ದಿನಾಂಕ 13-09-2026 ರಂದು ಕಾಪು ಹಳೇ ಮಾರಿಗುಡಿ ದೇವಸ್ಥಾನ ಸಭಾಂಗಣದಲ್ಲಿ ಆಯೋಜಿಸಲಾದ “RAPIDO CHESS” Tournament – 2026 ಚಸ್ ಟೊರ್ನಮೆಂಟ್ ಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಾದ ರುಡಾಲ್ಫ್, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಉಪಾಧ್ಯಕ್ಷರಾದ ಹೈದರ್, ಕಾಪು ಮಂಡಲ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಾದ ನಜೀರ್, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಶರಣ್ ಕುಮಾರ್ ಮಟ್ಟು ಹಾಗೂ ಗಣ್ಯರು ಉಪಸ್ಥಿತರಿದ್ದರು.