ಮಂಗಳೂರಿನಲ್ಲಿ ಸೆ.14ರಿಂದ 18ರವರೆಗೆ 41ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

0
11

ಮಂಗಳೂರು: ಶ್ರೀ ವಿದ್ಯಾ ಗಣಪತಿ ಸೇವಾ ಟ್ರಸ್ಟ್ (ರಿ.), ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಮಂಗಳೂರು ವಿಭಾಗದ ವತಿಯಿಂದ 41ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವನ್ನು ಸೆಪ್ಟೆಂಬರ್ 14ರಿಂದ 18ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಆಚರಿಸಲಾಗುವುದು.

ಗಣೇಶೋತ್ಸವದ ಅಂಗವಾಗಿ ಸೆಪ್ಟೆಂಬರ್ 14ರಂದು ಗಣಹೋಮ ಹಾಗೂ ಶ್ರೀ ದೇವರ ಪ್ರತಿಷ್ಠೆ ಸೇರಿದಂತೆ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿದಿನ ಸಂಜೆ ಭಜನೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಸೆಪ್ಟೆಂಬರ್ 14ರಂದು ಸಂಜೆ ನೃತ್ಯ ಕಾರ್ಯಕ್ರಮ ಹಾಗೂ ಸಂಗೀತ ಕಾರ್ಯಕ್ರಮ, ಸೆಪ್ಟೆಂಬರ್ 15ರಂದು ಆಧ್ಯಾತ್ಮಿಕ ಕಾರ್ಯಕ್ರಮ ಮತ್ತು ಭಜನಾ ಕಾರ್ಯಕ್ರಮ, ಸೆಪ್ಟೆಂಬರ್ 16ರಂದು ಶಿವಗಿರಿ ಮಕ್ಕಳ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ವಿಶೇಷ ಧಾರ್ಮಿಕ ಕಾರ್ಯಕ್ರಮ, ಸೆಪ್ಟೆಂಬರ್ 17ರಂದು ಸಾಂಸ್ಕೃತಿಕ ಮತ್ತು ಸಂಗೀತ ಕಾರ್ಯಕ್ರಮಗಳು ನಡೆಯಲಿವೆ.

ಸೆಪ್ಟೆಂಬರ್ 18ರಂದು ಸಂಜೆ ಶ್ರೀ ವಿದ್ಯಾಗಣಪತಿ ದೇವರ ವಿಸರ್ಜನಾ ಶೋಭಾಯಾತ್ರೆಯು ಮಂಗಳೂರು ನಗರದ ಪ್ರಮುಖ ಬೀದಿಗಳಲ್ಲಿ ಸಾಗಲಿದ್ದು, ಬಳಿಕ ವಿಸರ್ಜನಾ ಕಾರ್ಯಕ್ರಮ ನೆರವೇರಲಿದೆ.

ಗಣೇಶೋತ್ಸವದ ಎಲ್ಲಾ ಕಾರ್ಯಕ್ರಮಗಳಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕೆಂದು ಶ್ರೀ ವಿದ್ಯಾ ಗಣಪತಿ ಸೇವಾ ಟ್ರಸ್ಟ್ (ರಿ.) ವತಿಯಿಂದ ವಿನಂತಿಸಲಾಗಿದೆ.