ದಾವಣಗೆರೆಯ ಶ್ರೀ ವರಸಿದ್ಧಿ ವಿನಾಯಕ ಮಹೋತ್ಸವ ಸಮಿತಿ ಮತ್ತು ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಸೆಪ್ಟೆಂಬರ್ 20ರಂದು ಭಾನುವಾರ ಬೆಳಗ್ಗೆ 11 ಗಂಟೆಗೆ ಸಮಿತಿಯ 34ನೇ ವರ್ಷದ ಶ್ರೀ ವರಸಿದ್ಧಿ ವಿನಾಯಕ ಮಹೋತ್ಸವದ ಪ್ರಯುಕ್ತ ಸಾರ್ವಜನಿಕರಿಗೆ, ಹಿರಿಯರಿಗೆ, ಕಿರಿಯರಿಗೆ ಕಲಾವಿದರಿಗೆ ಉಚಿತ ಶ್ರೀ ಗಣಪತಿ ಚಿತ್ರ ಬರೆಯುವ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಅಧ್ಯಕ್ಷರಾದ ನಾಗೇಂದ್ರ ರೆಡ್ಡಿ ತಿಳಿಸಿದ್ದಾರೆ
ದಾವಣಗೆರೆ ಹರಳೆಣ್ಣೆ ಕೊಟ್ರಬಸಪ್ಪ ವೃತ್ತದಲ್ಲಿ (ರಾಮ ಎಂಡ್ ಕೋ ಸರ್ಕಲ್) ಶ್ರೀ ವಿನಾಯಕ ದೇವಸ್ಥಾನದ ಸಭಾಂಗಣದಲ್ಲಿ ನಡೆಯುವ ಈ ಉಚಿತ ಸ್ಪರ್ಧೆಯಲ್ಲಿ ಭಾಗವಹಿಸುವವರಿಗೆ ಚಿತ್ರ ಬರೆಯುವ ಡ್ರಾಯಿಂಗ್ ಶೀಟ್ ಉಚಿತವಾಗಿ ವಿತರಿಸುತ್ತೇವೆ, ಇನ್ನುಳಿದ ಚಿತ್ರ ಬರೆಯುವ ಪರಿಕರವನ್ನು ಕಲಾವಿದರೆ ತರಬೇಕು ಎಂದು ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈಯವರು ಪ್ರಕಟಿಸಿದ್ದಾರೆ.
ಕಿರಿಯ ಹಿರಿಯ ಕಲಾವಿದರಿಗೆ ಅವರಲ್ಲಿರುವ ಕಲಾ ಪ್ರತಿಭೆಗಳನ್ನು ಅನಾವರಣಗೊಳಿಸುವ ಸದುದ್ದೇಶದಿಂದ ಮುಕ್ತವಾದ ಅವಕಾಶ ಕಲ್ಪಿಸಲಾಗಿದೆ ಎಂದು ಕಲಾಕುಂಚದ ಪ್ರಧಾನ ಕಾರ್ಯದರ್ಶಿ ಕೆ.ಸಿ. ಉಮೇಶ್ ವಿನಂತಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಸನೀಹವಾಣಿಗಳಿಗೆ ಸಂಪರ್ಕಿಸಿ 9538732777, 9945785170

