ನಿಕಟಪೂರ್ವ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಗೆ ಕೃತಜ್ಞತೆ

0
12

ಶಿವಮೊಗ್ಗ ಕಾಂಗ್ರೆಸ್ ಸಮಿತಿಯ ನಿಕಟಪೂರ್ವ ಅಧ್ಯಕ್ಷರಾದ ಆರ್. ಪ್ರಸನ್ನ ಕುಮಾರ್ ಅವರು ಅಧ್ಯಕ್ಷರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿ, ತಮ್ಮ ಅವಧಿಯನ್ನು ಪೂರ್ಣಗೊಳಿಸಿ ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರಿಸಿದ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ವತಿಯಿಂದ ಕೃತಜ್ಞತೆ ಸಲ್ಲಿಸಲಾಯಿತು.

ಪ್ರಸನ್ನ ಕುಮಾರ್ ಅವರ ಅಧ್ಯಕ್ಷತೆಯ ಅವಧಿಯಲ್ಲಿ ಪಕ್ಷದ ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಅವರು ವಹಿಸಿದ ಪಾತ್ರ ಹಾಗೂ ನೀಡಿದ ಸಹಕಾರವನ್ನು ಈ ಸಂದರ್ಭದಲ್ಲಿ ಸ್ಮರಿಸಲಾಯಿತು.

ಕಾರ್ಯಕ್ರಮದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಕಲಗೋಡು ರತ್ನಾಕರ್, ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಹಾಲಪ್ಪ ಹಾಗೂ ಹಿಂದುಳಿದ ವರ್ಗಗಳ ವಿಭಾಗದ ಸಂಘಟನಾ ಕಾರ್ಯದರ್ಶಿ ವಿಜಯಕುಮಾರ್ ಉಪಸ್ಥಿತರಿದ್ದರು ಎಂದು ರಮೇಶ್ ಶಂಕರಘಟ್ಟ ಪತ್ರಿಕೆಯೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ