ಸೆ.17ರಿಂದ ಅ.17ರ ವರೆಗೆ ಜಿಲ್ಲೆಯಾದ್ಯoತ ‘ಸೇವಾ ಸಂಕಲ್ಪ ಅಭಿಯಾನ’ ಯಶಸ್ವಿಗೊಳಿಸಲು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ

0
1

ಬಿಜೆಪಿ ಜಿಲ್ಲಾ ಕಾರ್ಯ ತಂಡದ ಸಭೆ

ಪ್ರಧಾನಿ ನರೇಂದ್ರ ಮೋದಿ ಅವರ ಸಾಂವಿಧಾನಿಕ ಹುದ್ದೆಯ ಸಾರ್ವಜನಿಕ ಸೇವೆಗೆ 25 ವರ್ಷಗಳು ತುಂಬುವ ಹಿನ್ನೆಲೆಯಲ್ಲಿ ಸೆ.17ರಂದು ಅವರ ಜನ್ಮ ದಿನದಿಂದ ಅ.17ರ ವರೆಗೆ 1 ತಿಂಗಳ ಕಾಲ ‘ಸೇವಾ ಸಂಕಲ್ಪ ಅಭಿಯಾನ’ ಜಿಲ್ಲೆಯಾದ್ಯಂತ ನಡೆಯಲಿದೆ. ಈಗಾಗಲೇ ಅಭಿಯಾನದ ಜಿಲ್ಲಾ ಮತ್ತು ಮಂಡಲ ತಂಡ ಹಾಗೂ ಕಾರ್ಯಕ್ರಮಗಳ ಜಿಲ್ಲಾ ಪ್ರಮುಖರ ತಂಡಗಳನ್ನು ರಚಿಸಲಾಗಿದ್ದು, ಪಕ್ಷದ ಪ್ರಮುಖರು, ಎಲ್ಲಾ ಸ್ತರದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಸಂಘಟಿತ ಪ್ರಯತ್ನದ ಮೂಲಕ ವಿವಿಧ ಸೇವಾ ಕಾರ್ಯಗಳನ್ನು ನಿಗದಿತ ಅವಧಿಯಲ್ಲಿ ಕಾರ್ಯಗತಗೊಳಿಸಿ, ಜಿಲ್ಲೆಯ ಎಲ್ಲಾ 6 ಮಂಡಲಗಳ ವ್ಯಾಪ್ತಿಯಲ್ಲಿ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರು ಕರೆ ನೀಡಿದರು.

ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ಕಾರ್ಯ ತಂಡದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಸೇವಾ ಸಂಕಲ್ಪ ಅಭಿಯಾನ’ದ ಅಂಗವಾಗಿ ಆಶೀರ್ವಾದದ ದೀಪ, 25 ಕೋಟಿ ಮಕ್ಕಳ ಕನಸಿನ ಭಾರತ, ನಮೋ ಸೇವಾ ಗಾಥಾ, ಅಂಗಳದ ಉತ್ಸವ, ಬದಲಾವಣೆಯ ಕಥೆ, ವಿಕಸಿತ ಭಾರತ ಸಂಕಲ್ಪ ಯಾತ್ರೆ, ಸೇವಾ ಜ್ಯೋತಿ ಯಾತ್ರೆ, ಸೇವಾ ಸಂಕಲ್ಪ ಯಾತ್ರೆ, ಸೇವೆಯೇ ನನ್ನ ಕೊಡುಗೆ, ಸೇವಾ ಸೇತು ಅಭಿಯಾನ, ರಂಗೋಲಿ ರಾಷ್ಟ್ರ, ರಾಷ್ಟ್ರೀಯ ಇನ್ನೋವೇಷನ್ ಚಾಲೆಂಜ್, ಜನ ಸೇವಕ ಮಹಾ ಕುಂಭ ಎಂಬ 13 ಮಹತ್ವಪೂರ್ಣ ಸೇವಾ ಕಾರ್ಯ ಚಟುವಟಿಕೆಗಳನ್ನು ಜಿಲ್ಲೆಯಾದ್ಯಂತ ಬದ್ಧತೆಯಿಂದ ನಿರ್ವಹಿಸಿ, ಅಭಿಯಾನವನ್ನು ಅರ್ಥಪೂರ್ಣವಾಗಿಸಬೇಕು ಎಂದು ಅವರು ತಿಳಿಸಿದರು.

ಸೇವಾ ಸಂಕಲ್ಪ ಅಭಿಯಾನದ ಜಿಲ್ಲಾ ಸಹ ಸಂಚಾಲಕ ಉಮೇಶ್ ನಾಯ್ಕ್ ಚೇರ್ಕಾಡಿ ಅಭಿಯಾನದಡಿ ಕೈಗೊಳ್ಳಬೇಕಾದ ವಿವಿಧ ಸೇವಾ ಕಾರ್ಯಗಳ ಕುರಿತು ವಿಸ್ತ್ರತ ಮಾಹಿತಿ ನೀಡಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ನಾಯಕ್ ಎಸ್.ಐ.ಆರ್. ಪ್ರಕ್ರಿಯೆ ಹಾಗೂ ಪಕ್ಷದ ಸಂಘಟನಾತ್ಮಕ ವಿಚಾರಗಳ ಕುರಿತು ವಿಸ್ತ್ರತ ಮಾಹಿತಿ ನೀಡಿದರು.

ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಮಂಡಲವಾರು ಚಟುವಟಿಕೆಗಳ ವರದಿಯನ್ನು ಮಂಡಿಸಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಸೇವಾ ಸಂಕಲ್ಪ ಅಭಿಯಾನದ ಜಿಲ್ಲಾ ಸಂಚಾಲಕ ದಿನಕರ ಶೆಟ್ಟಿ ಹೆರ್ಗ ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಸೇವಾ ಸಂಕಲ್ಪ ಅಭಿಯಾನದ ಜಿಲ್ಲಾ ತಂಡದ ಸದಸ್ಯರುಗಳಾದ ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಷಾ ಪ್ರಕಾಶ್ ಶೆಟ್ಟಿ, ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷ ಪ್ರವೀಣ್ ಕುಮಾರ್ ಗುರ್ಮೆ, ಜಿಲ್ಲಾ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ಸದಾನಂದ ಕೈಪುಂಜಾಲು, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಕಮಲಾಕ್ಷ ಹೆಬ್ಬಾರ್, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಮಾಜಿ ಜಿಲ್ಲಾಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ ಸಹಿತ ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾ ಹಾಗೂ ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಪ್ರಕೋಷ್ಠಗಳ ಸಂಚಾಲಕರು ಮತ್ತು ಸಹ ಸಂಚಾಲಕರು, ಅಭಿಯಾನದ ಮಂಡಲ ತಂಡ ಹಾಗೂ ವಿವಿಧ ಕಾರ್ಯಕ್ರಮಗಳ ಜಿಲ್ಲಾ ಪ್ರಮುಖರು ಉಪಸ್ಥಿತರಿದ್ದರು.

ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ ಗೀತೆ ಹಾಡಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಜಿಲ್ಲಾ ಉಪಾಧ್ಯಕ್ಷೆ ನಳಿನಿ ಪ್ರದೀಪ್ ರಾವ್ ವಂದಿಸಿದರು.