ಕಡಂದಲೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜೀರ್ಣೋದ್ಧಾರ ಕುರಿತು ಸೆ.20ರಂದು ಭಕ್ತರ ಸಭೆ

0
35

ಕಡಂದಲೆ: ಕಡಂದಲೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದ ಕುರಿತು ಮಹತ್ವದ ಚರ್ಚೆ ಹಾಗೂ ನಿರ್ಣಯ ಕೈಗೊಳ್ಳುವ ಸಲುವಾಗಿ ಕಡಂದಲೆ–ಪಾಲಡ್ಕ ಭಕ್ತರ ಸಭೆ ಸೆ.20ರಂದು ನಡೆಯಲಿದೆ.
ಸಭೆಯು ಕಡಂದಲೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬೆಳಗ್ಗೆ 9.30ಕ್ಕೆ ನಡೆಯಲಿದ್ದು, ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಮುಂದಿನ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚೆ ನಡೆಯಲಿದೆ.


ದೇವಸ್ಥಾನದ ಭವಿಷ್ಯದ ಅಭಿವೃದ್ಧಿಗೆ ಸಂಬಂಧಿಸಿದ ಮಹತ್ವದ ವಿಷಯಗಳು ಸಭೆಯಲ್ಲಿ ಚರ್ಚೆಯಾಗಲಿರುವುದರಿಂದ ಪ್ರತಿ ಮನೆಯಿಂದ ಕನಿಷ್ಠ ಒಬ್ಬರು ಕಡ್ಡಾಯವಾಗಿ ಸಭೆಯಲ್ಲಿ ಭಾಗವಹಿಸುವಂತೆ ದೇವಸ್ಥಾನ ವ್ಯವಸ್ಥಾಪನ ಸಮಿತಿ ಮನವಿ ಮಾಡಿದೆ. ಎಲ್ಲಾ ಗ್ರಾಮಸ್ಥರು ಸಕ್ರಿಯವಾಗಿ ಪಾಲ್ಗೊಂಡು ಸಭೆಯನ್ನು ಯಶಸ್ವಿಗೊಳಿಸುವಂತೆ ಕಡಂದಲೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ವಿನಂತಿಸಿದ್ದಾರೆ.