ಪ್ರಧಾನಿ ಮೋದಿ ಜನ್ಮದಿನ: ಕಾಪುವಿನಲ್ಲಿ ಉಚಿತ ರಿಕ್ಷಾ ಸೇವೆಗೆ ಚಾಲನೆ

0
9

ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಉಚಿತ ರಿಕ್ಷಾ ಪ್ರಮಾಣಕ್ಕೆ ಇಂದು ದಿನಾಂಕ 17-09-2026 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಕಾಪು ಪೇಟೆ ಬಳಿ ಚಾಲನೆ ನೀಡಿದರು.

ನರೇಂದ್ರ ಮೋದಿ ಅವರ ಜನ್ಮದಿನ ಪ್ರಯುಕ್ತ ಕಾಪು ಮಂಡಲ ಬಿಜೆಪಿ ಎಸ್.ಸಿ ಮೋರ್ಚಾದ ಮಾಜಿ ಅಧ್ಯಕ್ಷರಾದ ಚಂದ್ರ ಮಲ್ಲಾರ್ ಇವರು ಸುಮಾರು 11 ವರ್ಷಗಳಿಂದ ಹಾಗೂ ಕಾಪು ಮಂಡಲ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾದ ನಜೀರ್ ಇವರು ಕಳೆದ 4 ವರ್ಷಗಳಿಂದ ಉಚಿತ ರಿಕ್ಷಾ ಪ್ರಮಾಣ ಸೇವೆ ನೀಡುತ್ತಾ ಬಂದಿರುತ್ತಾರೆ ಇವರಿಗೆ ಶಾಸಕರು ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿ, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಾಪು ಪುರಸಭೆಯ ಅಧ್ಯಕ್ಷರಾದ ಮೋಹಿನಿ ಶೆಟ್ಟಿ, ಉಪಾಧ್ಯಕ್ಷರಾದ ಸರೀತಾ ಶಿವಾನಂದ, ರಾಜ್ಯ ಬಿಜೆಪಿ ಮಾಜಿ ಉಪಾಧ್ಯಕ್ಷರಾದ ನಯನ ಗಣೇಶ್, ಕಾಪು ಪುರಸಭೆಯ ಸದಸ್ಯರಾದ ಅನಿಲ್ ಕುಮಾರ್, ಶೈಲೇಶ್ ಅಮೀನ್, ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಮಂಡಲ ಪದಾಧಿಕಾರಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.