ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರ ಜನ್ಮದಿನ ಪ್ರಯುಕ್ತ ಶಿಬಿರ ಹಾಗೂ ಕಣ್ಣಿನ ಉಚಿತ ತಪಾಸಣಾ ಶಿಬಿರ

0
8

ಕಾಪು: ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ವತಿಯಿಂದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ನೇತೃತ್ವದಲ್ಲಿ ಆದರ್ಶ್ ಆಸ್ಪತ್ರೆ ಉಡುಪಿ ಹಾಗೂ ಪ್ರಸಾದ್ ನೇತ್ರಾಲಯ ಉಡುಪಿ ಇವರ ಸಹಭಾಗಿತ್ವದಲ್ಲಿ ಸನ್ಮಾನ್ಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರ ಜನ್ಮದಿನ ಪ್ರಯುಕ್ತ ಇಂದು ದಿನಾಂಕ 17-09-2026 ರಂದು ಹಿರಿಯಡಕ ದೇವಾಡಿಗ ಸಭಾಭವನದಲ್ಲಿ ಆಯೋಜಿಸಲಾದ “ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಕಣ್ಣಿನ ಉಚಿತ ತಪಾಸಣಾ” ಶಿಬಿರವನ್ನು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಆದರ್ಶ ಆಸ್ಪತ್ರೆಯ ಡಾ. ಚಂದ್ರಶೇಖರ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಕಾಂತ್ ನಾಯಕ್, ಕಾಪು ಮಂಡಲ ಬಿಜೆಪಿ ಉಪಾಧ್ಯಕ್ಷರಾದ ಸಂದೀಪ್ ಶೆಟ್ಟಿ, ಉಡುಪಿ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಮಾಜಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಗೀತಾಂಜಲಿ ಸುವರ್ಣ, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಶರಣ್ ಕುಮಾರ್ ಮಟ್ಟು, ಗೋಪಾಲಕೃಷ್ಣ ರಾವ್, ಬೊಮ್ಮರಬೆಟ್ಟು ಶಕ್ತಿ ಕೇಂದ್ರದ ಉದಯ್ ಶೆಟ್ಟಿ, ವಿನಯ್ ಪೂಜಾರಿ, ದಯಾನಂದ ಪೂಜಾರಿ ಉಪಸ್ಥಿತರಿದ್ದರು.