ಶಿವಮೊಗ್ಗದ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶಾಂತವೀರ ನಾಯಕ್ ಇವರನ್ನು ಕೆಪಿಸಿಸಿ ಕಾರ್ಮಿಕ ವಿಭಾಗದ ನೂತನ ರಾಜ್ಯಾಧ್ಯಕ್ಷರನ್ನಾ ಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.
ಇಂದು ಕೆಪಿಸಿಸಿ ರಾಜ್ಯ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ಇವರು ತಕ್ಷಣದಿಂದ ಜಾರಿಗೆ ಬರುವಂತೆ ಇವರನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ.
ಶಾಂತವೀರ ನಾಯಕ್ ರಾಜ್ಯ ಕೆಪಿಸಿಸಿ ಅಸಂಘಟಿತ ಕಾರ್ಮಿಕ ವಿಭಾಗದ ಅಧ್ಯಕ್ಷರಾಗಿ ಕೆಲಸ ನಿರ್ವಹಿಸಿದ್ದರು. ಅಲ್ಲದೆ ಶಿವಮೊಗ್ಗ ಜಿಲ್ಲಾ ಪಂಚಾಯಿತಿಯಲ್ಲಿ ಎರಡು ಬಾರಿ ಸದಸ್ಯರಾಗಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. ಇವರ ಹೆಸರು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಗಾದಿಗೆ ಪ್ರಬಲವಾಗಿ ಕೇಳಿ ಬಂದಿತ್ತು. ಕೊನೆಯ ಕ್ಷಣದಲ್ಲಿ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಆ ಅವಕಾಶ ತಪ್ಪಿ ಹೋಗಿತ್ತು.
ಇವರು ಕೆಪಿಸಿಸಿ ಅಸಂಘಟಿತ ಕಾರ್ಮಿಕರ ವಿಭಾಗದ ರಾಜ್ಯ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ, ದಾವಣಗೆರೆಯಲ್ಲಿ ಅಸಂಘಟಿತ ಕಾರ್ಮಿಕರ ಮಹಾ ಸಮಾವೇಶ ಆಯೋಜಿಸಿ ವರಿಷ್ಠರ ಗಮನ ಸೆಳೆದಿದ್ದರು. ಆ ಸಮಾವೇಶದಲ್ಲಿ ರಾಹುಲ್ ಗಾಂಧಿ ಮಲ್ಲಿಕಾರ್ಜುನ ಖರ್ಗೆ, ಕೆ.ಸಿ. ವೇಣುಗೋಪಾಲ್ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಜಿ ಪರಮೇಶ್ವರ್ ಹಾಗೂ ರಾಜ್ಯ ಮತ್ತು ರಾಷ್ಟ್ರದ ಘಟಾನುಘಟಿ ನಾಯಕರುಗಳು ಭಾಗವಹಿಸಿದ್ದನ್ನು ಈ ಸಂದರ್ಭದಲ್ಲಿ ಸ್ಮರಿಸಬಹುದು.
ಈ ಮಾಹಿತಿಯನ್ನು ಪತ್ರಿಕೆಗೆ ರಮೇಶ ಶಂಕರಘಟ್ಟ ಒದಗಿಸಿದ್ದಾರೆ.

