ಮೂಡುಬಿದಿರೆ: ಮೂಡುಬಿದಿರೆಯ ಪ್ರತಿಷ್ಠಿತ ಸಂಘಟನೆ ಸರ್ವೋದಯ ಫ್ರೆಂಡ್ಸ್ ವತಿಯಿಂದ ಪ್ರತಿವರ್ಷ ಆಯೋಜಿಸಲಾಗುವ ಹುಲಿವೇಷ ಕುಣಿತ ಹಾಗೂ ಊದುಪೂಜೆ ಕಾರ್ಯಕ್ರಮದ ಸಂದರ್ಭದಲ್ಲಿ ಸಮಾಜ ಸೇವಕ, ಸಂಘಟಕ, ಇತಿಹಾಸ ಹಾಗೂ ಪರಿಸರ ಪ್ರೇಮಿ ಅಮರ ಕೋಟೆ ಅವರನ್ನು ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.
ಸಾಮಾಜಿಕ ಸೇವೆ, ಸಂಘಟನೆ, ಪರಿಸರ ಸಂರಕ್ಷಣೆ ಹಾಗೂ ಇತಿಹಾಸದ ಕುರಿತಾದ ಆಸಕ್ತಿಯ ಮೂಲಕ ವಿವಿಧ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಅಮರ ಕೋಟೆ ಅವರ ಸೇವೆಯನ್ನು ಗುರುತಿಸಿ ಸರ್ವೋದಯ ಫ್ರೆಂಡ್ಸ್ ವತಿಯಿಂದ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಬರ್ಕೆ ಯಜ್ಞೇಶ್ ಕುಲಾಲ್, ಸಂತೋಷ್ ಪೊಳಲಿ, ಜಗನ್ನಾಥ್ ಶೆಟ್ಟಿ, ಉದ್ಯಮಿ ರಂಜಿತ್ ಪೂಜಾರಿ, ವಕೀಲರಾದ ಚೇತನ್ ಶೆಟ್ಟಿ, ಮಾಜಿ ಪುರಸಭಾ ಅಧ್ಯಕ್ಷ ಪ್ರಸಾದ್ ಭಂಡಾರಿ, ಪ್ರಜ್ವಲ್ ಆಚಾರ್ಯ, ನವೀನ್ ಕುಮಾರ್
ನಾಗರಾಜ್ ಪೂಜಾರಿ ಹಾಗೂ ಸರ್ವೋದಯ ಫ್ರೆಂಡ್ಸ್ ಅಧ್ಯಕ್ಷ ಗುರು ಒಂಟಿಕಟ್ಟೆ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಸಾಂಪ್ರದಾಯಿಕ ಹುಲಿವೇಷ ಕುಣಿತ ಹಾಗೂ ಊದುಪೂಜೆಯೊಂದಿಗೆ ನಡೆದ ಕಾರ್ಯಕ್ರಮದಲ್ಲಿ ಸಂಘಟನೆಯ ಸದಸ್ಯರು ಹಾಗೂ ಸ್ಥಳೀಯರು ಭಾಗವಹಿಸಿದ್ದರು.

