ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ

0
33

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳೂರಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಗೂ ಮುನ್ನ ತಮ್ಮ ಸಂಪುಟ ಸಹೋದ್ಯೋಗಿಗಳ ಜೊತೆಗೆ ಕದ್ರಿಯ ಮಂಜುನಾಥ ಸ್ವಾಮಿ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿಗಳನ್ನು ಪೂರ್ಣಕುಂಭದೊಂದಿಗೆ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಭಕ್ತರು ಸ್ವಾಗತಿಸಿದ್ದಾರೆ. ಕಂದಾಯ ಇಲಾಖೆಯ ಮಹಿಳಾ ಸಿಬ್ಬಂದಿ ಹೂಮಳೆಗರೆದು ಸಿಎಂ ಅವರನ್ನು ಸ್ವಾಗತಿಸಿದ್ದು ವಿಶೇಷವಾಗಿತ್ತು.