ಮೂಡುಬಿದಿರೆ: ಶಿರ್ತಾಡಿಯ ಜವಾಹರಲಾಲ್ ನೆಹರು ಪ್ರೌಢಶಾಲೆಯ ಹಳೆವಿದ್ಯಾರ್ಥಿನಿ ರೇಷ್ಮಾ ಪೂಜಾರಿ (45) ಶುಕ್ರವಾರ ಮುಂಬೈಯಲ್ಲಿ ಹೃದಯಾಘಾತದಿಂದ ನಿಧನರಾದರು.
1995-96ನೇ ಸಾಲಿನಲ್ಲಿ ಶಿರ್ತಾಡಿ ಜವಾಹರಲಾಲ್ ನೆಹರು ಪ್ರೌಢಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ್ದ ರೇಷ್ಮಾ ಅವರು ಪೆರಾಡಿಯ ಕೊರಗಪ್ಪ ಪೂಜಾರಿ ಹಾಗೂ ಲಲಿತಾ ದಂಪತಿಯ ಪುತ್ರಿ. ಹೈಸ್ಕೂಲ್ ಶಿಕ್ಷಣ ಪೂರ್ಣಗೊಳಿಸಿದ ಬಳಿಕ ಮುಂಬೈಗೆ ತೆರಳಿದ ಅವರು ಅಲ್ಲಿಯೇ ಹೆಚ್ಚಿನ ವಿದ್ಯಾಭ್ಯಾಸ ಮುಂದುವರಿಸಿದ್ದರು.
ರೇಷ್ಮಾ ಅವರು ಅವಿವಾಹಿತರಾಗಿದ್ದರು. ಅವರ ಅಕಾಲಿಕ ನಿಧನಕ್ಕೆ ಕುಟುಂಬಸ್ಥರು, ಬಂಧು-ಮಿತ್ರರು ಹಾಗೂ ಹಳೆವಿದ್ಯಾರ್ಥಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.

