ಕೇಮಾರುವಿನ ಸಾಂದೀಪನಿ ಸದಾಶ್ರಮಕ್ಕೆ ₹1 ಕೋಟಿ ಅನುದಾನ: ಸರ್ಕಾರಕ್ಕೆ ಈಶ ವಿಠ್ಠಲದಾಸ ಸ್ವಾಮೀಜಿ ಕೃತಜ್ಞತೆ

0
1

ಮೂಡುಬಿದಿರೆ: ಇಲ್ಲಿನ ಕೇಮಾರುವಿನಲ್ಲಿರುವ ಶ್ರೀ ಕ್ಷೇತ್ರ ಸಾಂದೀಪನಿ ಸದಾಶ್ರಮಕ್ಕೆ ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ರೂ.1 ಕೋಟಿ ಅನುದಾನ ಘೋಷಣೆ ಮಾಡಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಮಠದ ಈಶ ವಿಠ್ಠಲದಾಸ ಸ್ವಾಮೀಜಿ, ತುಳುವಿಗೆ ಪ್ರಾಶಸ್ತ್ಯ ನೀಡಿರುವುದಕ್ಕೆ ಹಾಗೂ ಗ್ರಾಮೀಣ ಪ್ರದೇಶದಲ್ಲಿರುವ ಬಡ ಮಠಗಳನ್ನು ಗುರುತಿಸಿ ಆಯ್ಕೆ ಮಾಡಿರುವುದಕ್ಕೆ ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.
ವಾಸ್ತವವಾಗಿ ನಮ್ಮ ಮಠಗಳೆಲ್ಲ ಗ್ರಾಮೀಣ ಪ್ರದೇಶದಲ್ಲಿರುವ ಬಡ ಮಠಗಳಾಗಿವೆ. ಇಂತಹ ಗ್ರಾಮೀಣ ಪ್ರದೇಶದ ಬಡ ಮಠಗಳನ್ನು ಗುರುತಿಸಿ ಆಯ್ಕೆ ಮಾಡಿರುವುದಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಈಶ ವಿಠ್ಠಲದಾಸ ಸ್ವಾಮೀಜಿ ಹೇಳಿದ್ದಾರೆ.