ಬೆಳ್ತಂಗಡಿ: ಕರ್ನಾಟಕ ಟಿವಿ ಚಾನೆಲ್ ವತಿಯಿಂದ ಇತ್ತೀಚೆಗೆ ‘ಉತ್ತಮ ಶಾಸಕ’ ಪ್ರಶಸ್ತಿಗೆ ಪುರಸ್ಕೃತರಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರನ್ನು ಕುತ್ಲೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಹಾಗೂ ಗ್ರಾಮಸ್ಥರ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು.
ಸೆ.20ರಂದು ಶಾಸಕರ ಮಿಥಿಲಾ ಸ್ವಗೃಹದಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಿತು. ಕುತ್ಲೂರು ಗ್ರಾಮದ ಅಭಿವೃದ್ಧಿ ಹಾಗೂ ಸಾರ್ವಜನಿಕ ಸೇವೆಯಲ್ಲಿ ಶಾಸಕರ ಕಾರ್ಯವನ್ನು ಅಭಿನಂದಿಸಿ ಗಣೇಶೋತ್ಸವ ಸಮಿತಿ ಮತ್ತು ಗ್ರಾಮಸ್ಥರ ಪರವಾಗಿ ಗೌರವ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಕುತ್ಲೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಶಿವಣ್ಣ ಶೆಟ್ಟಿ, ಕಾರ್ಯದರ್ಶಿ ಆನಂದ ಸಾಲಿಯಾನ್, ಸಮಿತಿ ಸದಸ್ಯರಾದ ರವೀಶ್, ಅಜಿತ್ ಕುತ್ಲೂರು, ಪ್ರಭಾಕರ, ಸಂತೋಷ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

