ಮಾನ್ಯ ಮುಖ್ಯಮಂತ್ರಿಗಳಾದ ಡಿ. ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಶುಕ್ರವಾರ ಮಂಗಳೂರಿನಲ್ಲಿ ನಡೆದ ರಾಜ್ಯ ಸರಕಾರದ ಸಚಿವ ಸಂಪುಟ ಸಭೆಯಲ್ಲಿ ನಮ್ಮ ಪ್ರಾಚೀನ ತುಳು ಭಾಷೆಗೆ ಕರ್ನಾಟಕ ರಾಜ್ಯದ ಎರಡನೇ ಆಡಳಿತ ಭಾಷೆಯಾಗಿ ಅಧಿಕೃತ ಸ್ಥಾನಮಾನ ನೀಡಿರುವ ವಿಚಾರ ತಿಳಿದು ಸಂತೋಷವಾಯಿತು. ಅವಿಭಜಿತ ದಕ್ಷಿಣಕನ್ನಡ ಜಿಲ್ಲೆ ಹಾಗೂ ದೇಶ-ವಿದೇಶಗಳಲ್ಲಿರುವ ತುಳುವರ ಪರವಾಗಿ ರಾಜ್ಯ ಸರಕಾರಕ್ಕೆ ವಿಶೇಷ ಅಭಿನಂದನೆಗಳು.
ತುಳುಭಾಷೆಯನ್ನು ೮ನೇ ಪರಿಚ್ಛೇದಕ್ಕೆ ಸೇರಿಸುವ ಪ್ರಕ್ರಿಯೆಗೆ ಕೂಡಾ ಇದು ಸಹಕಾರಿಯಾಗಿದೆ ಎಂದು ನಾನು ಭಾವಿಸುತ್ತೇನೆ. 2006ರಲ್ಲಿ ನಾವು ಉಜಿರೆಯಲ್ಲಿ ವಿಶ್ವತುಳು ಸಮ್ಮೇಳನ ಆಯೋಜಿಸಿ ತುಳು ಭಾಷೆ, ನಾಡು, ನುಡಿ, ಸಂಸ್ಕೃತಿ ಬಗ್ಯೆ ವಿಶೇಷ ಗಮನ ಸೆಳೆದಿರುತ್ತೇವೆ. ತುಳುಗ್ರಾಮದ ಕಲ್ಪನೆ ರ್ವರ ಆರ್ಷಣೆಯ ಕೇಂದ್ರವಾಗಿ ಎಲ್ಲರ ಮುಕ್ತ ಪ್ರಶಂಸೆಗೆ ಪಾತ್ರವಾಗಿತ್ತು.
ನಮ್ಮ ಬೇಡಿಕೆಗೆ ಸರಕಾರದ ಸಕಾರಾತ್ಮಕವಾದ ಸ್ಪಂದನೆಗೆ ತುಳುನಾಡಿನ ಎಲ್ಲಾ ಅಭಿಮಾನಿಗಳ ಪರವಾಗಿ ವಿಶೇಷ ಅಭಿನಂದನೆಗಳು.
