ಮಿಲಾಗ್ರಿಸ್ ಕಾಲೇಜಿನಲ್ಲಿ ರಕ್ತದಾನ ಶಿಬಿರ

0
5

ಮಂಗಳೂರು : ಮಿಲಾಗ್ರಿಸ್ ಕಾಲೇಜಿನ, ಯುವ ರೆಡ್‌ಕ್ರಾಸ್ (YRC) ಮತ್ತು ರಾಷ್ಟ್ರೀಯ ಸೇವಾ ಯೋಜನೆ (NSS) ಘಟಕಗಳ ವತಿಯಿಂದ ಕಂಕನಾಡಿಯ ಫಾದರ್ಮುಲ್ಲರ್ ಮೆಡಿಕಲ್ ಕಾಲೇಜು ಆಸ್ಪತ್ರೆಯ ಸಹಯೋಗದಲ್ಲಿ ಕಾಲೇಜಿನ ಸಭಾಂಗಣದಲ್ಲಿ ರಕ್ತದಾನಶಿಬಿರವನ್ನುಆಯೋಜಿಸಲಾಯಿತು.

ಕಾರ್ಯಕ್ರಮವನ್ನುಉದ್ಘಾಟಿಸಿದಮಿಲಾಗ್ರಿಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ರೆವ. ಫಾ. ಐವನ್ ಮೈಕಲ್ ರೊಡ್ರಿಗಸ್ ಅವರು ಸಭೆಯನ್ನುದ್ದೇಶಿಸಿ ಮಾತನಾಡಿ, ವಿದ್ಯಾರ್ಥಿಗಳ ಸಾಮಾಜಿಕ ಜವಾಬ್ದಾರಿ ಏನು ಎಂಬುವುದನ್ನು ತಿಳಿಸುವ ನಿಟ್ಟಿನಲ್ಲಿ ರಕ್ತದಾನ ಶಿಬಿರಗಳುಅತ್ಯಂತಸಹಕಾರಿ. ಇಂತಹ ಸಮಾಜಮುಖಿ ಕಾರ್ಯಕ್ರಮಗಳು ನಿರಂತರವಾಗಿ ನಡೆಯಲಿ ಎಂದು ಹಾರೈಸಿದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಫಾದರ್ಮುಲ್ಲರ್ ಮೆಡಿಕಲ್ ಕಾಲೇಜು ಆಸ್ಪತ್ರೆ ಇಲ್ಲಿನ ಇಮ್ಯುನೊ-ಹೆಮಟಾಲಜಿ ಮತ್ತು ರಕ್ತ ವರ್ಗಾವಣೆ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಚಾರು ಖೋಸ್ಲಾ ಅವರು ಮಾತನಾಡಿ, ಸ್ವಯಂಪ್ರೇರಿತ ರಕ್ತದಾನದ ಮಹತ್ವ ಹಾಗೂ ರಕ್ತದಾನವು ಜೀವಗಳನ್ನು ಉಳಿಸುವಲ್ಲಿ ವಹಿಸುವ ಪ್ರಮುಖ ಪಾತ್ರದ ಕುರಿತು ತಿಳಿಸಿದರು.

ಕಾಲೇಜಿನಪ್ರಾಂಶುಪಾಲರು ಹಾಗೂ ಕ್ಯಾಂಪಸ್ನಿರ್ದೇಶಕರಾದರೆ. ಡಾ. ಆಲ್ವಿನ್ಸೆರಾವೊ ಮಾತನಾಡಿ, ವಿದ್ಯಾರ್ಥಿಗಳಲ್ಲಿಸೇವಾ ಮನೋಭಾವ ಮತ್ತು ಸಾಮಾಜಿಕ ಹೊಣೆಗಾರಿಕೆಯನ್ನು ಬೆಳೆಸುವ ಅಗತ್ಯವನ್ನು ಒತ್ತಿಹೇಳಿದರು.

ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾಯೋಜನಾಧಿಕಾರಿ ಕಾರ್ಯಕ್ರಮಾಧಿಕಾರಿ, ಜೋಯೆಲ್ಮಸ್ಕರೇನ್ಹಸ್, ಕಾಲೇಜಿನ ಉಪನ್ಯಾಸಕರು, ಸ್ವಯಂಸೇವಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಒಟ್ಟು 146 ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರುರಕ್ತದಾನಕ್ಕಾಗಿನೋಂದಾಯಿಸಿಕೊಂಡಿದ್ದು, ಅವರಲ್ಲಿ 101 ಯೂನಿಟ್ ರಕ್ತವನ್ನು ಫಾದರ್ಮುಲ್ಲರ್ ಮೆಡಿಕಲ್ ಕಾಲೇಜು ಆಸ್ಪತ್ರೆಯ ವೈದ್ಯಕೀಯ ತಂಡದ ಸಹಕಾರದೊಂದಿಗೆಸಂಗ್ರಹಿಸಲಾಯಿತು.

ಕಾರ್ಯಕ್ರಮದಯೂತ್ರೆಡ್ಕ್ರಾಸ್ನಕಾರ್ಯಕ್ರಮಾಧಿಕಾರಿಕು. ಸುಶ್ಮಿತಾಶೈಲಾಮೋರಸ್ ಅವರು ವಂದನಾರ್ಪಣೆ ಸಲ್ಲಿಸಿದರು. ವಿದ್ಯಾರ್ಥಿ ಮೊಹಮ್ಮದ್ಹಶೀರ್ಅಶ್ರಫ್ ಕಾರ್ಯಕ್ರಮವನ್ನು ನಿರೂಪಿಸಿದರು.