
ವೇದಮಾರೋಗ್ಯ ಆಯುರ್ವೇದ ಆಸ್ಪತ್ರೆ, ಮಂಗಳೂರು ಹಾಗೂ ಆರೋಗ್ಯ ಭಾರತಿ ಮಂಗಳೂರು ಇದರ ಸಹಯೋಗದಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಕಾರ್ಯಕ್ರಮ ಇವತ್ತು ವೇದಮಾರೋಗ್ಯ ಆಯುರ್ವೇದ ಆಸ್ಪತ್ರೆಯ ಕದ್ರಿ ಕಂಬಳ ರಸ್ತೆಯಲ್ಲಿರುವ ಆಸ್ಪತ್ರೆ ಯಲ್ಲಿ ನೆರವೇರಿತು.
ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮದ ಔಪಚಾರಿಕ ಉದ್ಘಾಟನೆಯನ್ನು ನೆರವೇರಿಸಲಾಯಿತು. ವೇದಮಾರೋಗ್ಯ ಆಸ್ಪತ್ರೆಯ ವೈದ್ಯರೂ ಆರೋಗ್ಯ ಭಾರತಿಯ ಜಿಲ್ಲಾ ಉಪಾಧ್ಯಕ್ಷರೂ ಆದ ಡಾ ಸಚಿನ್ ನಡ್ಕ ಅವರು ಪ್ರಾಸ್ತಾವಿಕ ಭಾಷಣ ಮಾಡಿ ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರಿಗೆ ಸ್ವಾಗತವನ್ನು ಕೋರಿದರು.
ಆರೋಗ್ಯ ಭಾರತಿಯ ಜಿಲ್ಲಾ ಅಧ್ಯಕ್ಷರಾದ ಡಾ ಈಶ್ವರ ಭಟ್ ಪಳ್ಳಾದೆಯವರು ಮಾತನಾಡಿ ಆಯುರ್ವೇದ ಚಿಕಿತ್ಸೆಯ ಮೂಲಕ ನಮ್ಮ ಆರೋಗ್ಯವನ್ನು ಕಾಪಾಡುವ ಮಹತ್ವವನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ಆರೋಗ್ಯ ಭಾರತಿಯ ಪ್ರಾಂತ ಉಪಾಧ್ಯಕ್ಷರೂ ಜಿಲ್ಲಾ ಗೌರವಾಧ್ಯಕ್ಷರೂ ಆದ ಡಾ ಮುರಳೀ ಮೋಹನ ಚೂಂತಾರು, ವಿಭಾಗ ಸಂಚಾಲಕರಾದ ಪುರುಷೋತ್ತಮ ದೇವಸ್ಯ, ಜಿಲ್ಲಾ ಕಾರ್ಯದರ್ಶಿಗಳಾದ ಉಮೇಶ್ ಪ್ರಭು ಬನ್ನೂರು ಹಾಗೂ ಜಿಲ್ಲಾ ಜೊತೆ ಕಾರ್ಯದರ್ಶಿಗಳಾದ ದಿನೇಶ್ ಚಂದ್ರಗಿರಿ ಮತ್ತು ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
