ಬ್ರಹ್ಮಾವರದ ಹೆಮ್ಮೆಯ ಪುತ್ರ ಸುಮಂತ್ ಭಟ್ ರವರಿಗೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ

0
26

ಫ್ರ್ಯಾಂಕಿ ಡಿಸೋಜ ಕೊಳಲಗಿರಿ ಜಿಲ್ಲಾಧ್ಯಕ್ಷರು, ತುಳುನಾಡ ರಕ್ಷಣಾ ವೇದಿಕೆ (ರಿ), ಉಡುಪಿ ಜಿಲ್ಲೆ ಇವರಿಂದ ಶುಭ ಹಾರೈಕೆ

ಉಡುಪಿ : ಕನ್ನಡ ವಿಭಾಗದ ಉತ್ತಮ ಚಿತ್ರ ‘ಮಿಥ್ಯ’ ಸಿನಿಮಾಗೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಲಭಿಸಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ. ಗೌರವಾನ್ವಿತ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ರವರಿಂದ ಪ್ರಶಸ್ತಿ ಸ್ವೀಕರಿಸಿದ ಇವರಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ಫ್ರ್ಯಾಂಕಿ ಡಿಸೋಜ ಕೊಳಲಗಿರಿ ಜಿಲ್ಲಾಧ್ಯಕ್ಷರು, ತುಳುನಾಡ ರಕ್ಷಣಾ ವೇದಿಕೆ ಉಡುಪಿ ಇವರು ತಿಳಿಸಿದ್ದಾರೆ.

ಬ್ರಹ್ಮಾವರದಂತಹ ಸಣ್ಣ ಊರಿನಿಂದ ಬೆಳೆದು ರಾಷ್ಟ್ರ ಮಟ್ಟದಲ್ಲಿ ಕನ್ನಡ ಚಿತ್ರರಂಗಕ್ಕೆ ಕೀರ್ತಿ ತಂದ ನಿಮ್ಮ ಸಾಧನೆ ಇಂದಿನ ಯುವ ಪೀಳಿಗೆಗೆ ಸ್ಪೂರ್ತಿಯಾಗಿದೆ. ನಿಮ್ಮಿಂದ ಇನ್ನೂ ಹೆಚ್ಚಿನ ಉತ್ತಮ ಕಲಾಕೃತಿಗಳು ಮೂಡಿ ಬರಲಿ ಎಂದು ಹಾರೈಸಿದ್ದಾರೆ.