ವಿದ್ಯಾಭಾರತಿ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟ: ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿ ರಾಷ್ಟ್ರ ಮಟ್ಟಕ್ಕೆ

0
14

ವಿದ್ಯಾಭಾರತಿ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿ ಖುಷಿ ಕೆ.ಎಂ. ಅವರು 44 ಕೆ.ಜಿ. ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಬೆಂಗಳೂರು ಜೈ ಗೋಪಾಲ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದಲ್ಲಿ ನಡೆದ ವಿದ್ಯಾಭಾರತಿ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಖುಷಿ ಕೆ.ಎಂ. ಭಾಗವಹಿಸಿ ಅತ್ಯುತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಗಳಿಸಿದ್ದಾರೆ.

ಇವರು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಹಾಗೂ ಯತೀಶ್ ಅವರ ನೇತೃತ್ವದಲ್ಲಿ ಕರಾಟೆ ತರಬೇತಿ ಪಡೆದಿದ್ದಾರೆ. ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುವ ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಉಪನ್ಯಾಸಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.