ಉಡುಪಿ ತಾಲೂಕು ಪ್ರಜಾಸೇವಾ ಆಂದೋಲನ ಸಭೆ

0
34

ಪ್ರಜಾಸೇವೆ ಇಲಾಖೆ ತಾಲೂಕು ಆಡಳಿತ ಉಡುಪಿ ವತಿಯಿಂದ ದಿನಾಂಕ 19-09-2026 ರಂದು ಹಿರಿಯಡಕ ದೇವಾಡಿಗ ಸಭಾಂಗಣದಲ್ಲಿ ಆಯೋಜಿಸಲಾದ “ಉಡುಪಿ ತಾಲೂಕು ಪ್ರಜಾಸೇವಾ ಆಂದೋಲನ ಸಭೆ”ಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಪ್ರಜಾಸೇವಾ ಆಂದೋಲನ ಸಭೆಯಲ್ಲಿ ಒಟ್ಟು 38 ಅರ್ಜಿಗಳನ್ನು ಸ್ವೀಕರಿಸಲಾಯಿತು. ಮೂಲಭೂತ ಸೌಕರ್ಯಗಳಾದ ರಸ್ತೆ, ದಾರಿದೀಪ, ಕುಡಿಯುವ ನೀರು ಮತ್ತು ಮೆಸ್ಕಾಂ ಇಲಾಖೆ ಹಾಗೂ ಕಂದಾಯ ಇಲಾಖೆಯಲ್ಲಿ ಅಕ್ರಮ ಸಕ್ರಮ, ನಿವೇಶನ, ಹಕ್ಕುಪತ್ರ, ಸಮಾಜಿಕ ಭದ್ರತಾ ಯೋಜನೆಗಳಲ್ಲಿನ ಸಮಸ್ಯೆ ಬಗ್ಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಪರಿಹಾರೋಪಾಯ ಕಂಡುಕೊಳ್ಳಲು ನಿರ್ಣಯಿಸಲಾಯಿತು.

ಈ ಸಂದರ್ಭದಲ್ಲಿ ಉಡುಪಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ರಮೇಶ್ ಕಾಂಚನ್,ಉಡುಪಿ ತಹಶೀಲ್ದಾರರಾದ ಗುರುರಾಜ್, ಉಡುಪಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಾದ ವಿಜಯ, ಪೊಲೀಸ್ ಉಪ ಅಧೀಕ್ಷಕರಾದ ಬೆಳ್ಳಿಯಪ್ಪ, ಆಡಳಿತಾಧಿಕಾರಿಗಳು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಆಡಳಿತಾಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.