ಕೊಡಗಿನ ಹೆಮ್ಮೆಯ ಕರವೇ ಸ್ವಾಭಿಮಾನಿ ಸೇನೆಗೆ ಆನೆ ಬಲ ಜಿಲ್ಲಾ ಮುಖಂಡರ ಸಮ್ಮುಖದಲ್ಲಿ ಹೊಸ ಪಡೆಯ ಶಕ್ತಿ ಪ್ರದರ್ಶನ

0
16

ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಕೊಡಗು ಜಿಲ್ಲಾ ಘಟಕದ ವತಿಯಿಂದ ದಿನಾಂಕ 26 ರಂದು ಹಮ್ಮಿಕೊಳ್ಳಲಾಗಿದ್ದ ವಿಶೇಷ ಸಭೆಯಲ್ಲಿ ಸಂಘಟನೆಗೆ ಹೊಸ ಸದಸ್ಯರನ್ನು ಅತ್ಯಂತ ಯಶಸ್ವಿಯಾಗಿ ಬರಮಾಡಿಕೊಳ್ಳಲಾಯಿತು. ಸಂಘಟನೆಯನ್ನು ಜಿಲ್ಲಾದ್ಯಂತ ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಈ ಮಹತ್ವದ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮದಲ್ಲಿ ಕರವೇ ಸ್ವಾಭಿಮಾನಿ ಸೇನೆಯ ಜಿಲ್ಲಾಧ್ಯಕ್ಷರಾದ ಫ್ರಾನ್ಸಿಸ್ ಡಿಸೋಜ, ಜಿಲ್ಲಾ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾದ ಜಯಶ್ರೀ ಮುರುಗೇಶ್, ಜಿಲ್ಲಾ ಉಪಾಧ್ಯಕ್ಷರಾದ ರಾಜಶೇಖರ್ ಗೌಡ, ಕುಶಾಲನಗರ ತಾಲೂಕು ಅಧ್ಯಕ್ಷರಾದ ಶಿವು, ಕಾರ್ಮಿಕ ಘಟಕದ ಅಧ್ಯಕ್ಷರಾದ ಚಂದ್ರು, ಕರವೇ ಸ್ವಾಭಿಮಾನಿ ಸೇನೆಯ ಪ್ರಧಾನ ಕಾರ್ಯದರ್ಶಿಗಳಾದ ಮಣಿಕಂಠ, ಜಿಲ್ಲಾ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ಭವ್ಯ, ಕುಶಾಲನಗರ ತಾಲೂಕು ಸಂಚಾಲಕರಾದ ಚಂದ್ರಶೇಖರ್ ವಿ.ಪಿ, ಸುಂಟಿಕೊಪ್ಪ ಹೋಬಳಿ ಘಟಕದ ಅಧ್ಯಕ್ಷರಾದ ಶರೀಫ್ ಹಾಗೂ ಯುವ ಘಟಕದ ಅಧ್ಯಕ್ಷರಾದ ಕ್ಲಿಫರ್ಡ್ ರೊಡ್ರಿಗಸ್ ಅವರು ಉಪಸ್ಥಿತರಿದ್ದು, ಹೊಸದಾಗಿ ಸೇರಿದವರನ್ನು ಆತ್ಮೀಯವಾಗಿ ಬರಮಾಡಿಕೊಂಡರು.

ಸಂಘಟನೆಗೆ ಹೊಸ ಸದಸ್ಯರ ಸೇರ್ಪಡೆ

ಕಾರ್ಮಿಕ ಘಟಕದ ಅಧ್ಯಕ್ಷರಾದ ಚಂದ್ರು ಅವರ ನೇತೃತ್ವದಲ್ಲಿ ಪುರುಷೋತ್ತಮ್ ಮತ್ತು ದಿನಿತ್ ಅವರು ಕರವೇ ಸ್ವಾಭಿಮಾನಿ ಸೇನೆಗೆ ಅಧಿಕೃತವಾಗಿ ಸೇರ್ಪಡೆಯಾದರು.
ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾದ ಜಯಶ್ರೀ ಮುರುಗೇಶ್ ಅವರು ದಿವ್ಯ ಡಿಸೋಜ ಅವರನ್ನು ಸಂಘಟನೆಗೆ ಬರಮಾಡಿಕೊಂಡರು. ಹಾಗೆಯೇ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ಭವ್ಯ ಅವರ ನೇತೃತ್ವದಲ್ಲಿ ನಾಗರತ್ನ ಅವರು ಕರವೇ ಸ್ವಾಭಿಮಾನಿ ಸೇನೆಗೆ ಸೇರಿದರು.

ಕೊಡಗು ಜಿಲ್ಲೆಯಲ್ಲಿ ಕನ್ನಡ ನಾಡು, ನುಡಿ, ಜಲ ಹಾಗೂ ಕಾರ್ಮಿಕರ ಮತ್ತು ಮಹಿಳೆಯರ ಹಕ್ಕುಗಳಿಗಾಗಿ ಹೋರಾಡುತ್ತಿರುವ ಕರವೇ ಸ್ವಾಭಿಮಾನಿ ಸೇನೆಗೆ ಇವರೆಲ್ಲರ ಸೇರ್ಪಡೆಯು ಸಂಘಟನೆಗೆ ಮತ್ತಷ್ಟು ಆನೆ ಬಲ ತಂದಿದೆ ಎಂದು ಈ ಸಂದರ್ಭದಲ್ಲಿ ಜಿಲ್ಲಾ ಮುಖಂಡರು ಹರ್ಷ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಕರವೇ ಸ್ವಾಭಿಮಾನಿ ಸೇನೆ ಕೊಡಗು ಜಿಲ್ಲಾಧ್ಯಕ್ಷರಾದ ಫ್ರಾನ್ಸಿಸ್ ಡಿಸೋಜ ಮತ್ತು ಜಿಲ್ಲಾ ಉಪಾಧ್ಯಕ್ಷರಾದ ರಾಜಶೇಖರ್ ಗೌಡ ಮತ್ತು ಜಿಲ್ಲಾ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾದ ಜಯಶ್ರೀ ಮುರುಗೇಶ್ ಮತ್ತು ಕುಶಾಲನಗರ ತಾಲೂಕು ಅಧ್ಯಕ್ಷರಾದ ಶಿವು ಮತ್ತು ಕುಶಾಲನಗರ ತಾಲ್ಲೂಕು ಕಾರ್ಮಿಕ ಘಟಕದ ಅಧ್ಯಕ್ಷರಾದ ಚಂದ್ರು ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮಣಿಕಂಠ ಮತ್ತು ಜಿಲ್ಲಾ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ಭವ್ಯ ಮತ್ತು ಕುಶಾಲನಗರ ತಾಲೂಕು ಸಂಚಾಲಕರಾದ ವಿಪಿ ಚಂದ್ರಣ್ಣ ಮತ್ತು ಸುಂಟಿಕೊಪ್ಪ ಹೋಬಳಿ ಅಧ್ಯಕ್ಷರಾದ ಶರೀಫ್ ಮತ್ತು ಸಂತುಕೊಪ್ಪ ಯುವ ಘಟಕದ ಅಧ್ಯಕ್ಷರಾದ ಕ್ಲಿಫರ್ಡ್ ರೊಡ್ರಿಗಸ್ ಮತ್ತು ಕರುಣ ಮತ್ತು ಹುಸೇನ್ ಮತ್ತು ನಿತಿನ್ ಮತ್ತು ಶಹಾದ್ ಮತ್ತು ಇನ್ನಿತರ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಭಾಗವಹಿಸಿದ್ದರು.