
ಮಣಿಪಾಲ್ ಮಾಹೆಯ ಎಂ.ಐ.ಸಿ ಕ್ಯಾಂಪಸ್ ನಲ್ಲಿ ಇರುವ ಸಮುದಾಯ ಬಾನುಲಿ ಕೇಂದ್ರದಲ್ಲಿ ಅಂತರಾಷ್ಟ್ರೀಯ ಸುರಕ್ಷಿತ ಗರ್ಭಪಾತ ದಿನದ ಅಂಗವಾಗಿ ಸುರಕ್ಷಿತ ಗರ್ಭಪಾತ ಹಾಗೂ ಕಾನೂನುಬದ್ಧ ಗರ್ಭಪಾತ ಕುರಿತು ವಿಶೇಷ ಕಾರ್ಯಕ್ರಮ ಪ್ರಸಾರವಾಗಲಿದೆ .
ಮರವಂತೆಯ ಪ್ರಾಥಮಿಕ ಆರೋಗ್ಯಕೇಂದ್ರದಲ್ಲಿ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರು ಹಾಗೂ ಆಡಳಿತ ವೈದ್ಯಾಧಿಕಾರಿಯಾಗಿರುವ ಡಾ.ಕೆ ಗಣೇಶ ಭಟ್ಟ ಅವರಿಂದ ವಿಶೇಷ ಮಾಹಿತಿ ಪ್ರಸಾರವಾಗಲಿದೆ.
ಇದು ಸೆಪ್ಟೆಂಬರ್28 ಸೋಮವಾರ ಸಂಜೆ ಸಮಯ 4.15 ಕ್ಕೆ ಪ್ರಸಾರವಾಗಲಿದೆ ಮತ್ತು ಸೆಪ್ಟೆಂಬರ್ 29ರಂದು ಮಧ್ಯಾಹ್ನ 12.15ಕ್ಕೆ ಮರು ಪ್ರಸಾರವಾಗಲಿದೆ.
ರೇಡಿಯೊ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal
ಮತ್ತು ಐಫೋನ್ ನ https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್‌ಲೋಡ್ ಮಾಡಿ ಈ ಕಾರ್ಯಕ್ರಮ ಕೇಳಬಹುದಾಗಿದೆ ಎಂದು ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.
