ಉಡುಪಿ : ಮಣಿಪಾಲ ಜಿಲ್ಲಾಧಿಕಾರಿ ಕಚೇರಿಗೆ ಸಂಪರ್ಕಿಸುವ ರಸ್ತೆಯಲ್ಲಿ ವಿಚಿತ್ರವಾಗಿ ವರ್ತಿಸುತ್ತಿದ್ದ ಸುಮಾರು 28 ವರ್ಷದ ಯುವಕನನ್ನು ಸ್ಥಳೀಯರು ಗಮನಿಸಿ 112 ಸಹಾಯವಾಣಿಗೆ ಮಾಹಿತಿ ನೀಡಿದ್ದರು. ಬಳಿಕ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರ ನೆರವಿನಿಂದ ಯುವಕನನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು.

ದಾಖಲು ಪ್ರಕ್ರಿಯೆ ವೇಳೆ ಯುವಕ ತನ್ನ ಹೆಸರು ಪ್ರಸಾದ್, ತಂದೆಯ ಹೆಸರು ಬಾತಣ್ಣ, ತುಮಕೂರು ನಿವಾಸಿ ಎಂದು ತಿಳಿಸಿದ್ದಾನೆ. ಆತನ ವಾರಸುದಾರರು ಉಡುಪಿ ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸುವಂತೆ ಸೂಚಿಸಲಾಗಿದೆ.

