ನವರಾತ್ರಿ ಮಹೋತ್ಸವಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರಿಗೆ ಆಹ್ವಾನ

0
29

ಕಾಸರಗೋಡು : ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಅಕ್ಟೋಬರ್ 11 ರಿಂದ 21 ರ ತನಕ ಜರಗುವ ನವರಾತ್ರಿ ಮಹೋತ್ಸವದ ಆಮಂತ್ರಣ ಪತ್ರಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾl ಡಿ. ವೀರೇಂದ್ರ ಹೆಗ್ಗಡೆಯವರಿಗೆ ನೀಡಿ ಆಮಂತ್ರಿಸಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಕ್ಷೇತ್ರ ಸಮಿತಿಯ ಪ್ರಮುಖರಾದ ಡಾl ಕೆ.ಎನ್. ವೆಂಕಟ್ರಮಣ ಹೊಳ್ಳ, ವಸಂತ ಕೆರೆಮನೆ ಹಾಗೂ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಕಾಸರಗೋಡು ತಾಲೂಕು ಗೌರವಾಧ್ಯಕ್ಷ ಹರಿದಾಸ ಜಯಾನಂದ ಕುಮಾರ್ ಹೊಸದುರ್ಗ ಉಪಸ್ಥಿತರಿದ್ದರು.