ಕುಂದಾಪುರ : ವೈದ್ಯರು, ಎಂಜಿನಿಯರ್‌ಗಳು, ವಕೀಲರು ಹಾಗೂ ಚಾರ್ಟರ್ಡ್ ಅಕೌಂಟೆಂಟ್‌ಗಳನ್ನು ಒಳಗೊಂಡ ರಾಮಕ್ಷತ್ರಿಯರ ವೃತ್ತಿಪರರ ಸಮಾವೇಶ ಡಿಸೆಂಬರ್ 20ರಂದು ನಡೆಯಲಿದ್ದು, ಇದರ ಪೂರ್ವಭಾವಿ ಸಭೆ ಅ.11ರಂದು ಸಂಜೆ 4.30ಕ್ಕೆ ಕುಂದಾಪುರದ ರಾಮಮಂದಿರದ ಸೀತಾರಾಮಚಂದ್ರ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.
ವಿಶ್ವ ರಾಮಕ್ಷತ್ರಿಯ ಮಹಾಸಂಘ (ರಿ.) ವತಿಯಿಂದ ಆಯೋಜಿಸಲಾಗುತ್ತಿರುವ ಈ ಸಮಾವೇಶದ ಪೂರ್ವಭಾವಿ ಸಭೆಗೆ ಕುಂದಾಪುರ, ಕೋಡಿ, ಉಪ್ಪಿಸಕುದ್ರು, ಕೋಟೇಶ್ವರ ಸೇರಿದಂತೆ ವಿವಿಧ ಕ್ಷೇತ್ರ ಸಮಿತಿಗಳ ಸಮಾಜ ಬಾಂಧವರು ಭಾಗವಹಿಸುವಂತೆ ಸಮಾವೇಶ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ವೃತ್ತಿಪರ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ರಾಮಕ್ಷತ್ರಿಯ ಸಮಾಜದ ವೈದ್ಯರು, ಎಂಜಿನಿಯರ್‌ಗಳು, ವಕೀಲರು ಹಾಗೂ ಚಾರ್ಟರ್ಡ್ ಅಕೌಂಟೆಂಟ್‌ಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಉದ್ದೇಶದಿಂದ ಸಮಾವೇಶ ಆಯೋಜಿಸಲಾಗಿದೆ. ಸಮಾವೇಶದ ರೂಪುರೇಷೆ ಹಾಗೂ ಪೂರ್ವಸಿದ್ಧತೆ ಕುರಿತು ಪೂರ್ವಭಾವಿ ಸಭೆಯಲ್ಲಿ ಚರ್ಚಿಸಲಾಗುವುದು.

