ಶಿರ್ಲಾಲು : ಬದ್ಯಾರು–ಶಿರ್ಲಾಲು ಶ್ರೀ ಲೋಕನಾಥೇಶ್ವರ ದೇವಸ್ಥಾನ, ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ, ಶ್ರೀ ದೇವಿ ಮಹಿಳಾ ಕೇಂದ್ರ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಶಿರ್ಲಾಲು ಇವರ ಸಂಯುಕ್ತ ಆಶ್ರಯದಲ್ಲಿ ನವರಾತ್ರಿ ಮತ್ತು ವಿಜಯದಶಮಿ ಪೂಜೆ ಹಾಗೂ ಭಜನಾ ಕಾರ್ಯಕ್ರಮ ಅಕ್ಟೋಬರ್ 11ರಿಂದ 20ರವರೆಗೆ ನಡೆಯಲಿದೆ.
ನವರಾತ್ರಿ ಅಂಗವಾಗಿ ಪ್ರತಿದಿನ ವಿಶೇಷ ಪೂಜೆ ಹಾಗೂ ಭಜನಾ ಕಾರ್ಯಕ್ರಮಗಳು ನಡೆಯಲಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾಗುವಂತೆ ಆಯೋಜಕರು ಮನವಿ ಮಾಡಿದ್ದಾರೆ.
ಧಾರ್ಮಿಕ ಹಾಗೂ ಭಕ್ತಿಭಾವದ ವಾತಾವರಣದಲ್ಲಿ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಸರ್ವರಿಗೂ ಆದರದ ಸ್ವಾಗತ ಕೋರಲಾಗಿದೆ.

