ಕ್ರೀಡಾಕೂಟ ನಡೆಯಲು ಬೇಕಾದ ಎಲ್ಲ ವ್ಯವಸ್ಥೆಗಳನ್ನು ಕಲ್ಪಿಸಿಕೊಡುತ್ತೇನೆ-ಅಭಯ ಚಂದ್ರ ಜೈನ್

0
3

ಮೂಡುಬಿದಿರೆ : ಸ್ವರಾಜ್ಯ ಮೈದಾನದಲ್ಲಿ ಕ್ರೀಡಾಕೂಟ ನಡೆಸಲು ಬೇಕಾದ ಅಗತ್ಯ ಸೌಲಭ್ಯಗಳ ಕೊರತೆ ಇದೆ. ಹಿಂದೆ ಕ್ರೀಡಾ ಸಚಿವನಾಗಿದ್ದಾಗ ಸಾಕಷ್ಟು ವ್ಯವಸ್ಥೆಗಳನ್ನು ಇಲ್ಲಿಗೆ ಮಾಡಿಕೊಟ್ಟಿರುತ್ತೇನೆ. ಇನ್ನು ಮುಂದೆಯೂ ಸರಕಾರದಿಂದ ಸಾಧ್ಯ ಇರುವ ಎಲ್ಲ ಸೌಲಭ್ಯಗಳನ್ನು ಒದಗಿಸುವ ಪ್ರಯತ್ನ ಮಾಡುತ್ತೇನೆ ಎಂದು ಮಾಜಿ ಸಚಿವ ಕೆ ಅಭಯಚಂದ್ರ ಜೈನ್ ಭರವಸೆ ನೀಡಿದರು.

ಅವರು ಅಕ್ಟೋಬರ್ ಐದರಂದು ದ ಕ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ,, ಸರ್ಕಾರಿ ಪ್ರೌಢಶಾಲೆ ಹೊಸಬೆಟ್ಟು ಇವರ ಸಂಯುಕ್ತ ಆಶ್ರಯದಲ್ಲಿ ಸ್ವರಾಜ್ಯ ಮೈದಾನದಲ್ಲಿ ನಡೆದ ಮೂಡುಬಿದರೆ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟವನ್ನು ದೀಪ ಬೆಳಗಿ ಉದ್ಘಾಟಿಸಿ ಮಾತನಾಡುತ್ತಿದ್ದರು.

ಕೆಎಂಎಫ್ ನಿರ್ದೇಶಕ ಸುಚರಿತ ಶೆಟ್ಟಿ ಮಾತನಾಡಿ ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಕ್ರೀಡಾಕೂಟ ಬಹಳಷ್ಟು ಅತ್ಯಗತ್ಯ. ಪ್ರಾಕೃತಿಕ ವಿಕೋಪದ ನಡುವೆಯೂ ವಿದ್ಯಾರ್ಥಿಗಳು ತಮ್ಮ ಕ್ಷಮತೆಯನ್ನು ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.

ವೇದಿಕೆಯಲ್ಲಿ ಬಿ ಇ ಓ ವಿರೂಪಾಕ್ಷಪ್ಪ, ಹೊಸಬೆಟ್ಟು ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಸಚೀಂದ್ರ ಕಲ್ಯಾಡೆ, ಸಕಲೇಶಪುರ ದೈಶಿ ಪರಿವಿಕ್ಷಣಾಧಿಕಾರಿ ನವೀನ್ ಪುತ್ರನ್, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಇ, ಮಹೇಶ್ವರಿ, ನಾಗರತ್ನ, ಹಾಜರಿದ್ದರು.

ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಸಚೀಂದ್ರ ಕಲ್ಯಾಡೆ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ಶಾಲಿನಿ ಕುಮಾರಿ ಕಾರ್ಯಕ್ರಮ ಸಂಘಟಿಸಿದ್ದರು. ನವೀನ್, ಮಹಾದೇವ ಕಾರ್ಯಕ್ರಮ ನಿರ್ವಹಿಸಿದರು.
.