ಮೋದಿ ಜನ್ಮದಿನಾಚರಣೆ : ಅಲ್ಪಸಂಖ್ಯಾತ ಮೋರ್ಚಾದಿಂದ ಚೆಸ್ ಪಂದ್ಯಾಟ

0
31

ಉಡುಪಿ : ಭಾರತೀಯ ಜನತಾ ಪಾರ್ಟಿ ಅಲ್ಪಸಂಖ್ಯಾತ ಮೋರ್ಚಾ ಉಡುಪಿ ಜಿಲ್ಲಾ ಘಟಕದ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿಯವರ ಮಾರ್ಗದರ್ಶನದಲ್ಲಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಆಯೋಜಿಸಲಾಗಿದ್ದ ಚೆಸ್ ಪಂದ್ಯಾಟದ ಸಮಾರೋಪ ಕಾರ್ಯಕ್ರಮವು ಬೈಂದೂರು ವಿಧಾನಸಭಾ ಕ್ಷೇತ್ರದ ತ್ರಾಸಿಯ ಅಣ್ಣಪ್ಪಯ್ಯ ಸಭಾ ಭವನದಲ್ಲಿ ದಿನಾಂಕ 04.10.2026 ರಂದು ನಡೆಯಿತು.

ಈ ಚೆಸ್ ಪಂದ್ಯಾಟವು 1ರಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ನಡೆದಿದ್ದು, ಜಿಲ್ಲೆಯ ಕಾರ್ಕಳ, ಕಾಪು, ಉಡುಪಿ, ಕುಂದಾಪುರ ಹಾಗೂ ಬೈಂದೂರು ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತ್ಯೇಕವಾಗಿ ಸ್ಪರ್ಧೆಗಳನ್ನು ನಡೆಸಲಾಯಿತು.

ಸೆಪ್ಟೆಂಬರ್ 6ರಂದು ಕಾರ್ಕಳದ ಶ್ರೀಮೂಡು ಮಹಾಗಣಪತಿ ಕಲಾ ಮಂದಿರದಲ್ಲಿ ಉದ್ಘಾಟನೆಗೊಂಡ ಚೆಸ್‌ ಪಂದ್ಯಾಟ, ಸೆಪ್ಟೆಂಬರ್ 13ರಂದು ಕಾಪುವಿನ ಹಳೆ ಮಾರಿಗುಡಿ ಸಭಾಂಗಣ, ಸೆಪ್ಟೆಂಬರ್ 20ರಂದು ಉಡುಪಿಯ ಬೋರ್ಡ್ ಹೈಸ್ಕೂಲ್ ಸಭಾಂಗಣ, ಸೆಪ್ಟೆಂಬರ್ 27ರಂದು ಕೋಟೇಶ್ವರದ ಸರಸ್ವತಿ ಕಲ್ಯಾಣ ಮಂಟಪ ಹಾಗೂ ಅಕ್ಟೋಬರ್ 4ರಂದು ತ್ರಾಸಿಯ ಅಣ್ಣಪ್ಪಯ್ಯ ಸಭಾ ಭವನದಲ್ಲಿ ಚೆಸ್ ಪಂದ್ಯಾಟಗಳು ನಡೆದವು.

ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್‌ ಶೆಟ್ಟಿ ಗಂಟಿಹೊಳೆ ಚೆಸ್‌ ಪಂದ್ಯಾಟದ ಸಮಾರೋಪಕ್ಕೆ ಚಾಲನೆ ನೀಡಿ, ಶುಭ ಹಾರೈಸಿದರು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿಮುಖ್ಯ ಅತಿಥಿಯಾಗಿ ಆಗಮಿಸಿದ ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್ ಮಾತುಗಳನ್ನಾಡಿದರು.

ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಮಾತುಗಳನ್ನಾಡಿದರು. ಕಾರ್ಯಕ್ರಮದ ಅಯೋಜಕರು ಹಾಗೂ ಉಡುಪಿ ಜಿಲ್ಲಾ ಅಲ್ಪ ಸಂಖ್ಯಾತ ಮೋರ್ಚಾದ ಅಧ್ಯಕ್ಷರಾದ ರುಡಾಲ್ಫ್ ಡಿಸೋಜ ಮಾಧ್ಯಮದೊಂದಿಗೆ ಕಾರ್ಯಕ್ರಮದ ಮಾಹಿತಿ ಹಂಚಿಕೊಂಡರು.

ಕಾರ್ಯಕ್ರಮದಲ್ಲಿ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಬೈಂದೂರು ಮಂಡಲ ಅಧ್ಯಕ್ಷರಾದ ಅನಿತ ಆರ್ ಕೆ ವಿಧಾನಪರಿಷತ್ ಸದಸ್ಯರಾದ ಕಿಶೋರ್ ಕುಮಾರ್, ಗಂಗೊಳ್ಳಿ ಚರ್ಚಿನ ಧರ್ಮಗುರುಗಳಾದ ಫಾದರ್‌ ರೋಷನ್‌, ಜಸೆಲ್ ಡಿಸೋಜ ರಾಜ್ಯ ಕಾರ್ಯದರ್ಶಿ ಅಲ್ಪಸಂಖ್ಯಾತ ಮೋರ್ಚಾ, ಚೆಸ್ ಮಾಸ್ಟರ್ ವಿಕ್ರಂ, ಜಿಲ್ಲಾ ಅಲ್ಪಸಂಖ್ಯಾತ ಮೊರ್ಚ ಮಂಡಲ ಅಧ್ಯಕ್ಷರಾದ ಅಂತೋನಿ ಡಿಸೋಜ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಪದಾಧಿಕಾರಿಗಳಾದ ನವೀನ್ ಡಿಸೋಜಾ, ಮೈಕಲ್ ಡಿಸೋಜಾ, ಚಿರಂಜೀವಿ ಜೈನ್, ಗ್ಲೇನ್ ಮೋನಿಸ್, ಜಿಲ್ಲಾ ಕಾರ್ಯದರ್ಶಿಗಳಾದ ಪ್ರಿಯದರ್ಶಿನಿ ದೇವಾಡಿಗ ಹಾಗೂ ಗಿರೀಶ್ ಎಮ್ ಮಂಚನ್, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಶೇಕ್ ಆಸಿಫ್, ಮಹಮ್ಮದ್ ಅಪ್ಸರ್ ಬೈಂದೂರು ಮಂಡಲ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಆದಿರಾಜ್ ಜೈನ್, ಫಾರೂಕ್ ನಾಗೂರು , ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ,ತ್ರಾಸಿ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷರಾದ ರವೀಂದ್ರ ಕಾರ್ವಿ,ತ್ರಾಸಿ ಶಕ್ತಿ ಕೇಂದ್ರದ ಅಧ್ಯಕ್ಷರಾದ ಪಾಂಡುರಂಗ ದೇವಾಡಿಗ, ಚೀಪ್ ಆರ್ಬಿಟರ್ ಕಾರ್ತಿಕ್ ಶೆಟ್ಟಿ ಹಾಗೂ ಚೆಸ್ ಕ್ಷೇತ್ರದ ಪ್ರಮುಖರು ಉಪಸ್ಥಿತರಿದ್ದರು

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಸಮಾರೋಪ ಕಾರ್ಯಕ್ರಮದಲ್ಲಿ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು, ಪೋಷಕರು, ಚೆಸ್ ಅಭಿಮಾನಿಗಳು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳ ಉತ್ಸಾಹಭರಿತ ಭಾಗವಹಿಸುವಿಕೆಯೊಂದಿಗೆ ಚೆಸ್ ಪಂದ್ಯಾಟದ ಸಮಾರೋಪ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.