ವಿಟ್ಲ : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕೇಪು ಗ್ರಾಮದ ನೀರಕಜೆ ನಿವಾಸಿ, ಟಿಪ್ಪರ್ ಚಾಲಕರಾಗಿದ್ದ ದಿನೇಶ್ (35) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.
ಮೃತರು ಪತ್ನಿ ಹಾಗೂ ಮಗುವನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಘಟನೆ ಕುರಿತು ಮಾಹಿತಿ ತಿಳಿದು ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

