ಉಪ್ಪೂರಿನ ಬಬ್ಬುಸ್ವಾಮಿ ದೇವಸ್ಥಾನದ ಹಿಂಭಾಗದ ರಸ್ತೆಗೆ ಕಾಂಕ್ರೀಟ್ : ಹೇರಿಯ ಉಪ್ಪುರು ಸಾಲ್ಮರ ಪ್ರಯತ್ನಕ್ಕೆ ಮೆಚ್ಚುಗೆ

0
21

ಉಪ್ಪೂರು: ಉಪ್ಪೂರು ಗ್ರಾಮದ ಬಬ್ಬುಸ್ವಾಮಿ ದೇವಸ್ಥಾನದ ಹಿಂಭಾಗದ ರಸ್ತೆಗೆ ಕಾಂಕ್ರೀಟೀಕರಣ ಹಾಗೂ ಹೊಸ ರಸ್ತೆ ನಿರ್ಮಾಣಕ್ಕಾಗಿ ನಿರಂತರವಾಗಿ ಮನವಿ ಸಲ್ಲಿಸಿ, ಅನುದಾನ ತರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಉಡುಪಿ ಜಿಲ್ಲಾ ಬಿಜೆಪಿ ಎಸ್‌ಸಿ ಮೋರ್ಚಾ ಮುಖಂಡ ಹೇರಿಯ ಉಪ್ಪೂರು ಸಾಲ್ಮರ ಅವರ ಸಮಾಜಮುಖಿ ಕಾರ್ಯಕ್ಕೆ ಗ್ರಾಮಸ್ಥರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಬಬ್ಬುಸ್ವಾಮಿ ದೇವಸ್ಥಾನದ ಹಿಂಭಾಗದ ರಸ್ತೆಯ ಅಭಿವೃದ್ಧಿಯ ಅಗತ್ಯವನ್ನು ಮನಗಂಡ ಹೇರಿಯ ಉಪ್ಪೂರು ಸಾಲ್ಮರ ಅವರು ಶಾಸಕ ಯಶ್‌ಪಾಲ್ ಸುವರ್ಣ ಅವರ ಗಮನಕ್ಕೆ ಸಮಸ್ಯೆಯನ್ನು ಹಲವು ಬಾರಿ ತಂದು, ರಸ್ತೆಗೆ ಕಾಂಕ್ರೀಟೀಕರಣ ಹಾಗೂ ಹೊಸ ರಸ್ತೆ ನಿರ್ಮಾಣಕ್ಕೆ ವಿಶೇಷ ಅನುದಾನ ಒದಗಿಸುವಂತೆ ಮನವಿ ಮಾಡಿದ್ದರು. ಅವರ ನಿರಂತರ ಪ್ರಯತ್ನದ ಫಲವಾಗಿ ರಸ್ತೆ ಅಭಿವೃದ್ಧಿಗೆ ಅನುದಾನ ದೊರಕುವಂತಾಗಿದೆ ಎಂದು ತಿಳಿಸಲಾಗಿದೆ.

ರಸ್ತೆ ಅಭಿವೃದ್ಧಿಯಿಂದ ಸ್ಥಳೀಯ ನಿವಾಸಿಗಳು, ದೇವಸ್ಥಾನಕ್ಕೆ ಆಗಮಿಸುವ ಭಕ್ತರು ಹಾಗೂ ವಾಹನ ಸವಾರರಿಗೆ ಹೆಚ್ಚಿನ ಅನುಕೂಲವಾಗಲಿದೆ. ಗ್ರಾಮೀಣ ಪ್ರದೇಶದ ಮೂಲಸೌಕರ್ಯ ಅಭಿವೃದ್ಧಿಗೆ ಹೇರಿಯ ಉಪ್ಪೂರು ಸಾಲ್ಮರ ಅವರು ತೋರಿದ ಕಾಳಜಿಗೆ ಸಾರ್ವಜನಿಕರು ಅಭಿನಂದನೆ ಸಲ್ಲಿಸಿದ್ದಾರೆ.

ಈ ಸಮಾಜಮುಖಿ ಕಾರ್ಯಕ್ಕೆ ಉಪ್ಪೂರು ಗ್ರಾಮ ಪಂಚಾಯಿತಿಯ ಮಾಜಿ ಉಪಾಧ್ಯಕ್ಷ ಸತೀಶ್ ಪೂಜಾರಿ ಅಮುಂಜೆ, ಸಾಮಾಜಿಕ ಕಾರ್ಯಕರ್ತ ಸತೀಶ್ ಪೂಜಾರಿ ಕೀಳಂಜೆ ಹಾಗೂ ಉಪ್ಪೂರು ಗ್ರಾಮದ ಸರ್ವ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿ, ಮುಂದಿನ ದಿನಗಳಲ್ಲೂ ಇದೇ ರೀತಿಯ ಜನಪರ ಕಾರ್ಯಗಳು ಮುಂದುವರಿಯಲಿ ಎಂದು ಶುಭ ಹಾರೈಸಿದ್ದಾರೆ.