ಉಡುಪಿ : ಎರಡು ಬೈಕ್‌ಗಳ ನಡುವೆ ಅಪಘಾತ ಸಂಭವಿಸಿ ಇಬ್ಬರು ಸವಾರರು ಗಾಯಗೊಂಡ ಘಟನೆ ಮಂಗಳವಾರ ಸಂಜೆ ಕುಕ್ಕಿಕಟ್ಟೆ ಡಯಾನ–ಭಾಗ್ಯಮಂದಿರದ ಬಳಿ ನಡೆದಿದೆ.
ಅಪಘಾತದಲ್ಲಿ ಗಾಯಗೊಂಡು ಅಸಹಾಯಕ ಸ್ಥಿತಿಯಲ್ಲಿದ್ದ ಇಬ್ಬರನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ತಕ್ಷಣ ಧಾವಿಸಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

ಗಾಯಾಳುಗಳನ್ನು ಸಂಗಪ್ಪ ಮತ್ತು ನವೀನ ಎಂದು ಗುರುತಿಸಲಾಗಿದೆ. ಇವರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಅಪಘಾತಕ್ಕೆ ನಿಖರ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿ ತಿಳಿದುಬಂದಿಲ್ಲ.

