
ಕಾಪು : ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯು ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳಾದ ಸ್ವರೂಪ ಟಿ.ಕೆ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಕಾಪು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಪ್ರವಾಸಿಗರಿಗೆ ತಾಣಗಳ ಅಭಿವೃದ್ಧಿಯ ಬಗ್ಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾದ ವಿ ಸುನಿಲ್ ಕುಮಾರ್, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎಂ.ಎ ಗಫೂರ್, ಸಹಾಯಕ ಆಯುಕ್ತರಾದ ರಶ್ಮಿ ಹಾಗೂ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
