ದ.ಕ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ‘ಆಸಿಡ್ ದಾಳಿಯ ಸಂತ್ರಸ್ತರ ರಕ್ಷಣೆಯ ಕುರಿತು ಅರಿವು ಕಾರ್ಯಾಗಾರ’

0
2

-ಮಂದಾರ ರಾಜೇಶ್

​ದ.ಕ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಂಗಳೂರು ವಕೀಲರ ಸಂಘ, ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಇಲಾಖೆ ಹಾಗೂ ಮಂಗಳೂರು ನಗರ ಮತ್ತು ಜಿಲ್ಲಾ ಪೊಲೀಸ್ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ “ಆಸಿಡ್ ದಾಳಿಯ ಸಂತ್ರಸ್ತರ ರಕ್ಷಣೆಯ ಕುರಿತು ಅರಿವು ಕಾರ್ಯಾಗಾರ”ವನ್ನು ಹಮ್ಮಿಕೊಳ್ಳಲಾಗಿದೆ.

ನಗರದ ಕೆ.ಎಸ್. ರಾವ್ ರಸ್ತೆಯಲ್ಲಿರುವ ಸೈಂಟ್ ಅಲೋಶಿಯಸ್ ಪಿ.ಯು. ಕಾಲೇಜಿನ ಲೋಯೆಲ್ಲಾ ಸಭಾಂಗಣದಲ್ಲಿ ಅಕ್ಟೋಬರ್ 8, 2026ರಂದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 12.30 ರವರೆಗೆ ಈ ಕಾರ್ಯಕ್ರಮವು ಜರುಗಲಿದೆ.

​ಈ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀಯುತ ಮಾನು ಕೆ.ಎಸ್. ಅವರು ಉದ್ಘಾಟಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಮಂಗಳೂರು ವಕೀಲರ ಸಂಘದ ಅಧ್ಯಕ್ಷರಾದ ಶ್ರೀಯುತ ಜಗದೀಶ್ ಶೇಣವ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಹೆಚ್.ಆರ್. ತಿಮ್ಮಯ್ಯ, ಮಹಿಳಾ ಮತ್ತು ಮಕ್ಕಳ ಇಲಾಖೆಯ ಉಪ ನಿರ್ದೇಶಕರಾದ ಶ್ರೀಧರ್ ಎಮ್.ಎಸ್., ಉಪ ಪೊಲೀಸ್ ಆಯುಕ್ತರಾದ . ಕೆ. ರವಿಶಂಕರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ಎಸ್. ಭೂಮರೆಡ್ಡಿ ಹಾಗೂ ತಹಶೀಲ್ದಾರ್ ರಮೇಶ್ ಬಾಬು ಟಿ. ಅವರು ಉಪಸ್ಥಿತರಿರುವರು

​ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಸ್ವಯಂಸೇವಕರು ಹಾಗೂ ಆಸಕ್ತರು ಉಪಸ್ಥಿತರಿರುವಂತೆ ಹಿರಿಯ ನ್ಯಾಯಾಧೀಶರು ಹಾಗೂ ದ. ಕ. ಜಿಲ್ಲಾ ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿಗಳಾದ ಶ್ರೀಮತಿ ಜೈ ಬುನ್ನಿಸ ಇವರು ಮಾಹಿತಿ ನೀಡಿದ್ದಾರೆ.