ಮೂಡುಬಿದಿರೆ: ಕೋಟೆಬಾಗಿಲು ವೀರಮಾರುತಿ ದೇವಸ್ಥಾನದ ತಿರುವಿನಲ್ಲಿ ಬುಧವಾರ ಸಂಜೆ ಸಂಭವಿಸಿದ ಸ್ಕೂಟಿ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದೀಕ್ಷಿತ್ ಪೂಜಾರಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಶಿರ್ತಾಡಿ ಕಡೆಯಿಂದ ಕೋಟೆಬಾಗಿಲು ಕಡೆಗೆ ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆ ಸ್ಕೂಟಿ ಸ್ಕಿಡ್ ಆಗಿ ದೀಕ್ಷಿತ್ ಪೂಜಾರಿ ಹಾಗೂ ಪ್ರಶ್ಚಿತ್ ಹೆಗ್ಡೆ ಗಂಭೀರವಾಗಿ ಗಾಯಗೊಂಡಿದ್ದರು. ಇಬ್ಬರನ್ನೂ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಗಂಭೀರವಾಗಿ ಗಾಯಗೊಂಡಿದ್ದ ಪ್ರಶ್ಚಿತ್ ಹೆಗ್ಡೆ ಅವರು ಬುಧವಾರ ಸಂಜೆ ಮೃತಪಟ್ಟಿದ್ದರು. ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದೀಕ್ಷಿತ್ ಪೂಜಾರಿ ಅವರಿಗೂ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ.

