ಬಂಟ್ವಾಳ : ಕಟ್ಟಡದ ಕಿಟಕಿಯ ಪಕ್ಕದಲ್ಲಿದ್ದ ಸಿಮೆಂಟ್ ಆವರಣದ ರಚನೆ ಕುಸಿದು ಬಿದ್ದ ಪರಿಣಾಮ ಕಾರ್ಮಿಕರೊಬ್ಬರು ಗಾಯಗೊಂಡ ಘಟನೆ ಗುರುವಾರ ಬಿ.ಸಿ.ರೋಡ್‌ನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂಭಾಗ ಸಂಭವಿಸಿದೆ.
ಇಲ್ಲಿನ ಹೋಟೆಲ್‌ವೊಂದರ ಸಮೀಪ ಶೀಟ್ ಅಳವಡಿಸಲಾಗಿದ್ದ ಜಾಗದ ಪಕ್ಕದ ಕಟ್ಟಡದ ಕಿಟಕಿಯ ಬದಿಯಲ್ಲಿ ನಿರ್ಮಿಸಲಾಗಿದ್ದ ಸಿಮೆಂಟ್ ಆವರಣದ ರಚನೆ ಏಕಾಏಕಿ ಕುಸಿದು ಬಿದ್ದಿದೆ. ಈ ವೇಳೆ ಸ್ಥಳದಲ್ಲಿದ್ದ ಕಾರ್ಮಿಕರೊಬ್ಬರಿಗೆ ಗಾಯಗಳಾಗಿವೆ.
ಗಾಯಗೊಂಡ ಕಾರ್ಮಿಕರು ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಘಟನೆ ಕುರಿತು ಮಾಹಿತಿ ತಿಳಿದ ಬಂಟ್ವಾಳ ನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

