ಮಂಗಳೂರು ಉತ್ತರ ವಲಯ ಅಥ್ಲೆಟಿಕ್ಸ್ ಕ್ರೀಡಾಕೂಟ

0
6

ದ ಕ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಛೇರಿ, ಮೂಡುಬಿದಿರೆ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಕಿನ್ನಿಗೋಳಿ ರೋಟರಿ ಆಂಗ್ಲ ಮಾಧ್ಯಮ ಶಾಲೆ ಸಂಯುಕ್ತ ಆಶ್ರಯದಲ್ಲಿ ಮಂಗಳೂರು ಉತ್ತರ ವಲಯ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಅಥ್ಲೆಟಿಕ್ಸ್ ಕ್ರೀಡಾಕೂಟ ಮೂಡುಬಿದಿರೆ ಸ್ವರಾಜ್ಯ ಮೈದಾನದಲ್ಲಿ ಅಕ್ಟೋಬರ್ ಒಂಬತ್ತು ಮತ್ತು ಹತ್ತರಂದು ನಡೆಯುತ್ತಿದೆ. ತಾ 9 ರಂದು ನಡೆದ ಕ್ರೀಡಾಕೂಟದ ಉದ್ಘಾಟನೆಯನ್ನು ಡಾ ಎಂ ಮೋಹನ್ ಆಳ್ವ ನಡೆಸಿದರು. ರೋಟರಿ ಜಿಲ್ಲಾ ಗವರ್ನರ್ ಸತೀಶ್ ಬೋಳಾರ್ ಧ್ವಜಾರೋಹಣ ಗೈದರು.

ಆಶೀರ್ವಚನ ಗೈದ ಕಟೀಲು ಅನುವಂಶಿಕ ಮುಕ್ತಸರ ವಾಸುದೇವ ಆಸ್ರಣ್ಣ ಮಾತನಾಡಿ ವಿದ್ಯಾರ್ಥಿಗಳಿಗೆ ಕ್ರೀಡೆಯಿಂದ ಉತ್ತಮ ಆರೋಗ್ಯವಂತರಾಗಲು ಹರಸಿದರು.
ವೇದಿಕೆಯಲ್ಲಿ ಮಂಗಳೂರು ಉತ್ತರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಜೇಮ್ಸ್ ಕುಟಿನ್ಹ, ಉತ್ತರ ವಲಯ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ವೇದಾವತಿ ಬಿಕೆ, ರೊ. ಜೋಯೆಲ್ ಡಿಸೋಜ, ರೊ. ಪ್ರವೀಣ್ ಸಾಲಿಯಾನ್, ರೊ. ದೇವಿ ದಾಸ್ ಶೆಟ್ಟಿ, ರೊ. ರಘುರಾಮ ಶೆಟ್ಟಿ ಏಕ ರಾಮ್ ಶೆಟ್ಟಿ, ಸ್ವರಾಜ್ ಶೆಟ್ಟಿ, ಮುಖ್ಯ ಶಿಕ್ಷಕಿ ಸುನೀತಾ, ದೈಹಿಕ ಶಿಕ್ಷಣ ಶಿಕ್ಷಕಿ ವಿಂದ್ಯ ಹಾಜರಿದ್ದರು. ಕಟೀಲು ಕಾಲೇಜಿನ ಸಾಯಿನಾಥ್ ಕಾರ್ಯಕ್ರಮ ನಿರ್ವಹಿಸಿದರು.

ವರದಿ ರಾಯಿ ರಾಜ ಕುಮಾರ್