ಅ.11ರಂದು ಮೂಡುಬಿದಿರೆಯಲ್ಲಿ ಶ್ರೀ ಶಾರದೋತ್ಸವದ ಪ್ರಯುಕ್ತ ರಂಗೋಲಿ ಸ್ಪರ್ಧೆ

0
12

ಮೂಡುಬಿದಿರೆ : ಇಲ್ಲಿನ ಶ್ರೀ ವೀರ ಮಾರುತಿ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ನಡೆಯುತ್ತಿರುವ 37ನೇ ವರ್ಷದ ಶ್ರೀ ಶಾರದಾ ಮಹೋತ್ಸವದ ಪ್ರಯುಕ್ತ ಅಕ್ಟೋಬರ್ 11ರಂದು ರಂಗೋಲಿ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

ಸ್ಪರ್ಧೆಯು ಭಾನುವಾರ ಬೆಳಗ್ಗೆ 10 ಗಂಟೆಗೆ ಮೂಡುಬಿದಿರೆಯ ಶ್ರೀ ವೆಂಕಟರಮಣ ದೇವಸ್ಥಾನದ ಸುಕೃತೀಂದ್ರ ಕಲಾಮಂದಿರದಲ್ಲಿ ನಡೆಯಲಿದೆ.

ರಂಗವಲ್ಲಿ ಕಲೆಯ ಮೂಲಕ ಸೃಜನಶೀಲತೆ ಹಾಗೂ ಕಲಾತ್ಮಕ ಪ್ರತಿಭೆಯನ್ನು ಪ್ರದರ್ಶಿಸಲು ಆಸಕ್ತರಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವವರು ನಿಗದಿತ ಸಮಯಕ್ಕೆ ಆಗಮಿಸಿ ಪಾಲ್ಗೊಳ್ಳುವಂತೆ ಶ್ರೀ ವೀರ ಮಾರುತಿ ಸೇವಾ ಟ್ರಸ್ಟ್‌ನ ಪ್ರಕಟಣೆ ತಿಳಿಸಿದೆ.