ಬಂಟ್ವಾಳ :ಇಲ್ಲಿನ ರಾಯಿ-ಕೊಯಿಲ-ಅರಳ ಹಿಂದೂ ಧರ್ಮೋತ್ಥಾನ ವೇದಿಕೆ ಟ್ರಸ್ಟ್ ಮತ್ತು ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ವತಿಯಿಂದ ಅ.19ರಿಂದ 20ರತನಕ ಕೊಯಿಲ ಹನುಮಾನ್ ನಗರದಲ್ಲಿ 24ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಕಾರ್ಯಕ್ರಮ ನಡೆಯಲಿದೆ.
ಅ.19ರಂದು ಬೆಳಿಗ್ಗೆ 10 ಗಂಟೆಗೆ ಭಗವಾಧ್ವಜಾರೋಹಣ, 10.56ಕ್ಕೆ ವಿಗ್ರಹ ಪ್ರತಿಷ್ಠೆ, 11ರಿಂದ ಭಜನೆ, ಮಧ್ಯಾಹ್ನ 12.30ಕ್ಕೆ ದೇವರಿಗೆ ವಿಶೇಷ ಪೂಜೆ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ, 2.30ರಿಂದ ಭಜನೆ, 5ರಿಂದ ಸಾಂಸ್ಕೃತಿಕ ಕಾರ್ಯಕ್ರಮ, 7.30ರಿಂದ ಯಕ್ಷಗಾನ ಪ್ರದರ್ಶನಗೊಳ್ಳಲಿದೆ. ಅ.20ರಂದು ಬೆಳಿಗ್ಗೆ ಗಂಟೆ 7ರಿಂದ ಚಂಡಿಕಾಯಾಗ, 11.30ರಿಂದ ಸಭಾ ಕಾರ್ಯಕ್ರಮ, ಮಧ್ಯಾಹ್ನ 1 ಗಂಟೆಗೆ ದೇವರಿಗೆ ವಿಶೇಷ ಪೂಜೆ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ, 2.30ರಿಂದ ಭರತನಾಟ್ಯ ಸಹಿತ ಸಾಂಸ್ಕೃತಿಕ ಕಾರ್ಯಕ್ರಮ, 4.30ಕ್ಕೆ ಧ್ವಜಾವರೋಹಣ, ಸಂಜೆ ಗಂಟೆ 6ರಿಂದ ಶೋಭಾಯಾತ್ರೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
