ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

0
3

ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಧನುಷ್ ಎಸ್, ಯಶಸ್ ಎಚ್ . ಸಿ ದ್ವಿತೀಯ ಪಿಯುಸಿ ಗಗನ್ ಕೆ.ಎನ್, ತೇಜಸ್ ಟಿ. ಆರ್, ಜಶ್ವಂತ್ ಗೌಡ, ಧನುಷ್ ಕೆ . ಎಚ್, ಆಕಾಶ್ ಭಾಗವಹಿಸಿರುತ್ತಾರೆ .

ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ ,ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.