ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿಯವರಿಗೆ ಸರ್ಕಾರದಿಂದ ಆಹ್ವಾನ

0
17

ಕಟಪಾಡಿ : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಶ್ರೀ ಕ್ಷೇತ್ರ ಶಂಕರ ಪುರದ ಶ್ರೀ ಸಾಯಿ ಮುಖ್ಯ ಪ್ರಾಣ ದೇವಾಲಯದ ಮುಖ್ಯಸ್ಥರಾದ
ಶ್ರೀ ಸಾಯಿ ಈಶ್ವರ್ ಗುರೂಜಿಯವರಿಗೆ ಕರ್ನಾಟಕದ ಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಅವರಿಂದ ಗೌರವಪೂರ್ವಕ ಆಹ್ವಾನ ಬಂದಿದೆ ಎಂದು ಕ್ಷೇತ್ರದ ಪ್ರಕಟನೆ ತಿಳಿಸಿದೆ.

ಉಡುಪಿ ಜಿಲ್ಲೆಯ ಹೆಮ್ಮೆಯಾದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರಿಗೆ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಭಾಗವಹಿಸಲು ಗೌರವಪೂರ್ವಕವಾಗಿ ಆಹ್ವಾನ ನೀಡಲಾಗಿರುವುದು ಅತ್ಯಂತ ಸಂತೋಷ ಹಾಗೂ ಹೆಮ್ಮೆಯ ವಿಷಯವಾಗಿದೆ.

ನಾಡಿನ ಸಾಂಸ್ಕೃತಿಕ ಪರಂಪರೆ, ಧಾರ್ಮಿಕ ವೈಭವ ಹಾಗೂ ಆಧ್ಯಾತ್ಮಿಕ ಮಹಿಮೆಯನ್ನು ಸಾರುವ ಮೈಸೂರು ದಸರಾ ಮಹೋತ್ಸವಕ್ಕೆ ಗುರುಜಿಯವರಿಗೆ ದೊರೆತ ಈ ಆಹ್ವಾನವು ಭಕ್ತವೃಂದಕ್ಕೆ ಸಂತಸದ ಕ್ಷಣವಾಗಿದೆ.

ತಾಯಿ ಚಾಮುಂಡೇಶ್ವರಿಯ ಕೃಪಾಶೀರ್ವಾದದೊಂದಿಗೆ ಗುರುಜಿಯವರ ಆಧ್ಯಾತ್ಮಿಕ ಸೇವೆ ಹಾಗೂ ಲೋಕಕಲ್ಯಾಣದ ಸಂಕಲ್ಪಗಳು ನಿರಂತರವಾಗಿ ಸಾಗಲಿ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.