ಮಂಗಳೂರು : ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆಯಲ್ಲಿ ಪತಿಯೊಬ್ಬ ತನ್ನ ಪತ್ನಿಯನ್ನು ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಮಂಗಳೂರಿನ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕೊಲೆಯಾದ ಮಹಿಳೆಯನ್ನು ಸೋನಾಲಿ (30) ಎಂದು ಗುರುತಿಸಲಾಗಿದೆ. ಆಕೆಯ ಪತಿ ಶಿವಲಿಂಗಪ್ಪ ಕೊಲೆ ಮಾಡಿದ ಆರೋಪ ಎದುರಿಸುತ್ತಿದ್ದಾನೆ. ಅಕ್ರಮ ಸಂಬಂಧದ ಶಂಕೆ ಈ ಕೃತ್ಯಕ್ಕೆ ಕಾರಣ ಎನ್ನಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಕಾವೂರು ಪೊಲೀಸರು ಆರೋಪಿ ಶಿವಲಿಂಗಪ್ಪನನ್ನು ಬಂಧಿಸಿದ್ದಾರೆ. ಈ ಕುರಿತು ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

