ಬೆಳ್ಮಣ್ ಲಯನ್ಸ್ ಕ್ಲಬ್ ವತಿಯಿಂದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ – 280 ಅಧಿಕ ಮಂದಿ ಭಾಗಿ

0
26

ಬೆಳ್ಮಣ್: ಲಯನ್ಸ್ ಕ್ಲಬ್ ಬೆಳ್ಮಣ್ ವತಿಯಿಂದ ಆದರ್ಶ್ ಆಸ್ಪತ್ರೆ, ಉಡುಪಿ ಇವರ ಸಹಯೋಗದೊಂದಿಗೆ ಬೆಳ್ಮಣ್ಣು ಸಂತ ಜೋಸೆಫರ ದೇವಾಲಯ, ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್, ರೋಟರಿ ಕ್ಲಬ್ ಬೆಳ್ಮಣ್ಣು, ನವ ಚೇತನ ಸೇವಾ ಬಳಗ ತೋಡಾರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಕಾಪು ತಾಲೂಕು ಇದರ ಸಂಯುಕ್ತ ಆಶ್ರಯದಲ್ಲಿ ಬೆಳ್ಮಣ್ಣು ಸಂತ ಜೋಸೆಫರ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಜರಗಿತು.

ಈ ಶಿಬಿರದಲ್ಲಿ ಬೆಳ್ಮಣ್ ಹಾಗೂ ಸುತ್ತಮುತ್ತಲಿನ ಜನರಿಗೆ ಆರೋಗ್ಯ ಸೇವೆಗಳನ್ನು ಒದಗಿಸಲಾಯಿತು. 280ಕ್ಕೂ ಅಧಿಕ ಮಂದಿ ಶಿಬಿರದಲ್ಲಿ ಭಾಗವಹಿಸಿದ್ದರು.

ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕರಾದ ವಿ. ಸುನಿಲ್ ಕುಮಾರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದವರು ಲಯನ್ಸ್ ಕ್ಲಬ್ ಬೆಳ್ಮಣ್‌ನ ಸಮಾಜಸೇವಾ ಕಾರ್ಯಗಳನ್ನು ಶ್ಲಾಘಿಸಿ, ಅಗತ್ಯ ಸಹಕಾರದ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಶಾಸಕರಿಗೆ ಹಾಗೂ ಆದರ್ಶ್ ಆಸ್ಪತ್ರೆಯ ವೈದ್ಯರಿಗೆ ಕ್ಲಬ್ ವತಿಯಿಂದ ಸನ್ಮಾನಿಸಿದರು.

ಲಯನ್ಸ್ ಕ್ಲಬ್ ಬೆಳ್ಮಣ್ ಅಧ್ಯಕ್ಷರಾದ ಲಯನ್ ಬಿ. ಎಚ್. ಶಿವರಾಮ ಆಚಾರ್ಯ ಅವರು ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ವಿವಿಧ ಸಂಘ-ಸಂಸ್ಥೆಗಳ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ಬಿನ ಅಧ್ಯಕ್ಷರಾದ ಸುರೇಶ್ ಪೂಜಾರಿ ಅಬ್ಬನಡ್ಕ, ಬೆಳ್ಮಣ್ಣು ರೋಟರಿ ಕ್ಲಬ್ಬಿನ ಅಧ್ಯಕ್ಷರಾದ ಪ್ರಸಾದ್ ಶೆಟ್ಟಿ, ತೋಡಾರು ನವ ಚೇತನ ಸೇವ ಬಳಗದ ಅಧ್ಯಕ್ಷರಾದ ಕಿರಣ್ ಕುಲಾಲ್, ಬೆಳ್ಮಣ್ಣು ಲಯನ್ಸ್ ಕ್ಲಬ್ ನ ಸೀತಾರಾಮ್ ಭಟ್, ಗ್ರೆಗರಿ ಮಿನೇಜಸ್, ಫೌಸ್ಟಿನ್ ಡಿಸೋಜ, ಡಾ. ಪ್ರಕಾಶಾತ್ಮ, ಲಯನ್ ವಲೇರಿಯನ್ ಡಿಸೋಜ, ರಾಮಚಂದ್ರ ಕಾಮತ್, ಲಯನ್ ರಂಜಿತ್ ಕೆ. ಎಸ್. ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಬೆಳ್ಮಣ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಜನರಿಗೆ ಉತ್ತಮ ಆರೋಗ್ಯ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಆಯೋಜಿಸಲಾದ ಈ ಶಿಬಿರವು ಜನಸೇವೆಯ ಮಹತ್ವದ ಕಾರ್ಯಕ್ರಮವಾಗಿ ಮೂಡಿಬಂದಿತು.

ಲಯನ್ ಜ್ಯೋತಿ ಆಚಾರ್ಯ ಅವರು ಪ್ರಾರ್ಥನೆ ನೆರವೇರಿಸಿದರು. ಪಿಡಿಜಿ ಲಯನ್ ಎನ್. ಎಂ. ಹೆಗ್ಡೆ ಅವರು ಕಾರ್ಯಕ್ರಮ ನಿರೂಪಿಸಿದರು.
ಲಯನ್ಸ್ ಕ್ಲಬ್ ಬೆಳ್ಮಣ್ ಕಾರ್ಯದರ್ಶಿ ಲಯನ್ ಟೀನಾ ಡೆಸಾ ಅವರು ವಂದನಾರ್ಪಣೆ ಸಲ್ಲಿಸಿ, ಶಿಬಿರದ ಯಶಸ್ಸಿಗೆ ಸಹಕರಿಸಿದ ಆದರ್ಶ್ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ವರ್ಗ, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸ್ವಯಂಸೇವಕರು ಮತ್ತು ಸರ್ವರಿಗೂ ಕೃತಜ್ಞತೆ ಸಲ್ಲಿಸಿದರು.