ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಕುರಿತು ಸಮಾಲೋಚನ ಸಭೆ

0
13

-ಮಂದಾರ ರಾಜೇಶ್ ಭಟ್

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಗತ್ಯವಿರುವ ಸಿದ್ಧತೆಗಳು ಚುರುಕುಗೊಂಡಿದ್ದು, ಈ ಕುರಿತು ಸಮಾಲೋಚನಾ ಸಭೆ ನಡೆಸಲಾಗಿದ್ದು ಜಿಲ್ಲಾಧಿಕಾರಿಗಳ ಸಹಿತ ಉನ್ನತ ಅಧಿಕಾರಿಗಳ ಸಮಿತಿಯನ್ನು ರಚಿಸಲು ಸಿದ್ಧತೆ ನಡೆದಿದೆ ಎಂದು ವರದಿಯಾಗಿದೆ.

ಯು.ಟಿ. ಖಾದರ್ ಅವರ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಕರಾವಳಿ ಭಾಗದ ಅಭಿವೃದ್ಧಿ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಹಲವು ಮಹತ್ವದ ವಿಚಾರಗಳನ್ನು ಚರ್ಚಿಸಲಾಗಿದೆ ಎಂದು ಬಲ್ಲಮೂಲಗಳು ತಿಳಿಸಿವೆ.

ಜನರು ದೂರದ ಬೆಂಗಳೂರಿಗೆ ಪ್ರಯಾಣ ಬೆಳೆಸಿ, ದೂರು ದಾಖಲಿಸಿ ನ್ಯಾಯ ಪಡೆದುಕೊಳ್ಳಲು ಅತ್ಯಂತ ಪರಿಶ್ರಮ ಪಡಬೇಕಾಗುತ್ತದೆ. ಜನರ ಈ ವಾಸ್ತವಿಕ ಸಮಸ್ಯೆಯನ್ನು ಅರಿತುಕೊಂಡು ಕಾರ್ಯನಿರ್ವಹಿಸಬೇಕಿದೆ ಎಂದು ಹಿರಿಯ ನ್ಯಾಯವಾದಿ ಎಂ.ಪಿ. ನರೋನ್ನ ಅಭಿಪ್ರಾಯಪಟ್ಟಿದ್ದಾರೆ.

ಎಲ್ಲರ ಸಹಕಾರ ಮತ್ತು ಸಲಹೆಯನ್ನು ಪಡೆದುಕೊಂಡು ಹೈಕೋರ್ಟ್ ಪೀಠ ಸ್ಥಾಪನೆಗಾಗಿ ಪ್ರಾಮಾಣಿಕ ಪ್ರಯತ್ನ ಮಾಡೋಣ ಎಂದು ಐವನ್ ಡಿಸೋಜಾ ತಿಳಿಸಿದ್ದಾರೆ.

​ಕರಾವಳಿಯ ಮಂಗಳೂರಿನಲ್ಲಿ ಪೀಠ ಸ್ಥಾಪನೆಯ ಸಾಧ್ಯತೆಗಳನ್ನು ಪರಿಶೀಲಿಸಲು ಸ್ವತಃ ಹೈಕೋರ್ಟ್‌ನಿಂದಲೇ ವಿಶೇಷ ಸಮಿತಿಯನ್ನು ರಚಿಸಲಾಗಿದೆ.
​ನೆರೆಯ ಜಿಲ್ಲೆಗಳ ಜನಪ್ರತಿನಿಧಿಗಳ ಸಾರ್ವಜನಿಕರ ಹಾಗೂ ಗಣ್ಯರ ಸಹಕಾರ ಕೂಡ ಪಡೆದುಕೊಂಡು ಕರಾವಳಿ ಭಾಗದ ಜನಪ್ರತಿನಿಧಿಗಳು, ಗಣ್ಯರು ಹಾಗೂ ಸಾರ್ವಜನಿಕರ ಸಹಕಾರದೊಂದಿಗೆ ಈ ಕೆಲಸ ಆಗಬೇಕಿದೆ ಎಂದು ಅಭಿಪ್ರಾಯ ಪಡಲಾಗಿದೆ

​ ದೂರದ ಊರಿಗೆ ಪ್ರಯಾಣ ಬೆಳೆಸಿ ನ್ಯಾಯ ಪಡೆದುಕೊಳ್ಳುವುದು ಸುಲಭದ ಕೆಲಸವಲ್ಲ. ಹಾಗಾಗಿ, ಮಂಗಳೂರಿನಲ್ಲಿ ಪೀಠ ಸ್ಥಾಪನೆಯಾದರೆ ಪಕ್ಕದ ಎಲ್ಲಾ ಜಿಲ್ಲೆಗಳಿಗೂ ಇದರ ಅನುಕೂಲ ಸಿಗಲಿದ್ದು, ಸಾರ್ವಜನಿಕರ ಅಲೆದಾಟ ತಪ್ಪಲಿದೆ ಎಂದು ಅಭಿಪ್ರಾಯಪಡಲಾಗಿದೆ.

ಹೈಕೋರ್ಟ್ ಪೀಠ ಸ್ಥಾಪನೆಗೆ ಕರಾವಳಿ ಭಾಗದ ಜನಪ್ರತಿನಿಧಿಗಳ ಸಂಪೂರ್ಣ ಬೆಂಬಲ ಪಡೆಯಲು ಚಿಂತಿಸಲಾಗಿದೆ.
​ಕರಾವಳಿ ಭಾಗದಲ್ಲಿ ಪೀಠ ಸ್ಥಾಪನೆಯಾದರೆ ಪ್ರಕರಣಗಳ ತ್ವರಿತ ವಿಲೇವಾರಿಗೆ ಹೆಚ್ಚಿನ ಅವಕಾಶ ದೊರಕುತ್ತದೆ ಎಂಬುದು ಸಭೆಯ ಅಂಶವಾಗಿದೆ.

ಒಟ್ಟಾರೆಯಾಗಿ ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಈಗ ನಡೆದ ಸಭೆಯಿಂದ ಉತ್ತಮ ಸ್ಪಂದನೆ ಸಿಗಬಹುದು ಎಂಬ ಒಮ್ಮತದ ಅಭಿಪ್ರಾಯವಾಗಿದೆ.