ಎಕ್ಸ್‌ಟ್ರೀಮ್ ಯೂನಿಕ್ ನೆಸ್ಟ್ ಎಂಟರ್‌ಪ್ರೈಸಸ್ ಪ್ರೈವೇಟ್ ಲಿಮಿಟೆಡ್‌ನ 2ನೇ ಬಂಪರ್ ಡ್ರಾ

0
34

ಗ್ರಾಹಕರ ವಿಶ್ವಾಸವೇ ಸಂಸ್ಥೆಯ ಬೆಳವಣಿಗೆಗೆ ಶಕ್ತಿ: ವಿನೋದ್ ಕುಂಪಲ

ಮೈಸೂರು: ಎಕ್ಸ್‌ಟ್ರೀಮ್ ಯೂನಿಕ್ ನೆಸ್ಟ್ ಎಂಟರ್‌ಪ್ರೈಸಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ 2ನೇ ಬಂಪರ್ ಡ್ರಾ ಕಾರ್ಯಕ್ರಮವು ಮೈಸೂರಿನ ರೋಟರಿ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಂಸ್ಥೆಯ ನಾಯಕ ವಿನೋದ್ ಕುಂಪಲ ಅವರು, ಬಂಪರ್ ಡ್ರಾ ಕಾರ್ಯಕ್ರಮಕ್ಕೆ ಆಗಮಿಸಿದ ಮೈಸೂರು ಭಾಗದ ರೈತರು ಹಾಗೂ ಗ್ರಾಹಕರಿಗೆ ಕೃತಜ್ಞತೆ ಸಲ್ಲಿಸಿದರು.

ನಮ್ಮ ಸಂಸ್ಥೆಯು ಕಳೆದ ಆರು ವರ್ಷಗಳಿಂದ ಗ್ರಾಹಕರ ವಿಶ್ವಾಸದೊಂದಿಗೆ ಕಾರ್ಯನಿರ್ವಹಿಸುತ್ತಿದೆ. ಆರಂಭದಲ್ಲಿ ಮಂಗಳೂರು ಮತ್ತು ಮೂಡಬಿದಿರೆಯಲ್ಲಿ ಶ್ರೀ ದುರ್ಗಾ ಎಂಟರ್‌ಪ್ರೈಸಸ್ ಎಂಬ ಹೆಸರಿನಲ್ಲಿ ಸಂಸ್ಥೆಯನ್ನು ಪ್ರಾರಂಭಿಸಲಾಗಿತ್ತು. ಇದೀಗ ಅದು ಎಕ್ಸ್‌ಟ್ರೀಮ್ ಯೂನಿಕ್ ನೆಸ್ಟ್ ಎಂಟರ್‌ಪ್ರೈಸಸ್ ಪ್ರೈವೇಟ್ ಲಿಮಿಟೆಡ್ ಆಗಿ ರೂಪಾಂತರಗೊಂಡಿದೆ ಎಂದು ತಿಳಿಸಿದರು.ಗ್ರಾಹಕರು ಸಂಸ್ಥೆಯ ಮೇಲೆ ಇಟ್ಟಿರುವ ನಂಬಿಕೆ ಮತ್ತು ಪ್ರೋತ್ಸಾಹಕ್ಕೆ ಧನ್ಯವಾದ ಸಲ್ಲಿಸಿದ ಅವರು, ಕಳೆದ ತಿಂಗಳು ಗ್ರಾಹಕರಿಗೆ ಕಿಯಾ ಕಾರನ್ನು ಬಹುಮಾನವಾಗಿ ನೀಡಲಾಗಿದೆ. ಗ್ರಾಹಕರ ವಿಶ್ವಾಸ ಹಾಗೂ ಬೆಂಬಲದಿಂದ ಸಂಸ್ಥೆಯು ಪ್ರೈವೇಟ್ ಲಿಮಿಟೆಡ್ ಸ್ಥಾನಮಾನವನ್ನು ಪಡೆದುಕೊಂಡಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕಿ ಪ್ರತಿಮಾ ಸತೀಶ್, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ಲತೀಶ್ ಪುತ್ರನ್, ಮೈಸೂರು ಭಾಗದ ಅತಿಥಿ ನಾಯಕ ಮಹದೇವ ಸ್ವಾಮಿ, ವಿನೋದ್, ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಚೇತನ್ ಉಪಸ್ಥಿತರಿದ್ದರು. ಶ್ರೀನಿಧಿ ಕಾರ್ಯಕ್ರಮವನ್ನು ನಿರೂಪಿಸಿದರು.

ವರದಿ : ಜಗದೀಶ್ ಪೂಜಾರಿ ಕಡಂದಲೆ