ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗ ಹಾಗೂ ಮೂಡುಬಿದಿರೆಯ ಶ್ರೀ ಮಹಾವೀರ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ 2026–27ನೇ ಸಾಲಿನ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಉಡುಪಿ ವಲಯದ ಅಂತರಕಾಲೇಜು ಪುರುಷರ ಫುಟ್ಬಾಲ್ ಪಂದ್ಯಾವಳಿಯು ಶ್ರೀ ಮಹಾವೀರ ಕಾಲೇಜಿನ ಜಿ.ವಿ. ಪೈ ಮೈದಾನದಲ್ಲಿ ಉದ್ಘಾಟನೆಗೊಂಡಿತು.
ಮೂಡುಬಿದಿರೆ ಭೈರವಿ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ರಾಮಚಂದ್ರ ಕೆಂಬಾರೆ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿ, ಫುಟ್ಬಾಲ್ ವಿಶ್ವದ ಅತ್ಯಂತ ಜನಪ್ರಿಯ ಕ್ರೀಡೆಗಳಲ್ಲಿ ಒಂದಾಗಿದ್ದು, ಭಾರತದಲ್ಲಿಯೂ ಹೆಚ್ಚಿನ ಜನಪ್ರಿಯತೆ ಗಳಿಸುತ್ತಿದೆ. ಹೆಚ್ಚಿನ ಸಂಖ್ಯೆಯ ಕ್ರೀಡಾಪಟುಗಳನ್ನು ಆಕರ್ಷಿಸುತ್ತಿರುವ ಈ ಕ್ರೀಡೆಯು ದಿನದಿಂದ ದಿನಕ್ಕೆ ಹೆಚ್ಚು ಪ್ರಾಮುಖ್ಯತೆ ಪಡೆಯುತ್ತಿದೆ. ಫುಟ್ಬಾಲ್ ಪಂದ್ಯಗಳ ಫಲಿತಾಂಶವು ಆಟಗಾರರ ಕೌಶಲ್ಯ, ಸಮಯಪ್ರಜ್ಞೆ, ತಂಡದ ಒಗ್ಗಟ್ಟು ಹಾಗೂ ಅಚ್ಚುಕಟ್ಟಾದ ಯೋಜನೆಯನ್ನು ಅವಲಂಬಿಸಿರುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶ್ರೀ ಮಹಾವೀರ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಕರ್ನಾಟಕ ಸರ್ಕಾರದ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಅವರು ಕ್ರೀಡಾಪಟುಗಳನ್ನು ಉದ್ದೇಶಿಸಿ ಮಾತನಾಡಿ, ಪಂದ್ಯಾವಳಿಯಲ್ಲಿ ಭಾಗವಹಿಸುವ ಎಲ್ಲ ಸ್ಪರ್ಧಾಳುಗಳಿಗೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಮಂಗಳೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಜೆರಾಲ್ಡ್ ಸಂತೋಷ್ ಡಿ’ಸೋಜಾ, ಎಂ.ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಪ್ರಾಂಶುಪಾಲ ಧನಂಜಯ ಶೆಟ್ಟಿ, ಶ್ರೀ ಮಹಾವೀರ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಾಗರಾಜ್, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಅಕ್ಷಿತ್ ರೈ, ಕ್ರೀಡಾ ವೀಕ್ಷಕ ಡಾ. ಮಧು, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ಹರೀಶ್ ಹಾಗೂ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರವೀಣ್ ಭಂಡಾರಿ ಉಪಸ್ಥಿತರಿದ್ದರು.
ಶ್ರೀ ಮಹಾವೀರ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ರಾಧಾಕೃಷ್ಣ ಸ್ವಾಗತಿಸಿದರು. ವಿದ್ಯಾರ್ಥಿನಿ ವಿಕ್ರೀತ್ ಧನ್ಯವಾದ ಸಮರ್ಪಿಸಿದರು. ವಿದ್ಯಾರ್ಥಿನಿ ಸಾಕ್ಷಿ ಕಾರ್ಯಕ್ರಮ ನಿರೂಪಿಸಿದರು.

