ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಎಸ್.ಎನ್. ಮೂಡುಬಿದಿರೆ ಪಾಲಿಟೆಕ್ನಿಕ್ ತಂಡಕ್ಕೆ ತೃತೀಯ ಸ್ಥಾನ

0
30

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ತಾಂತ್ರಿಕ ವಿದ್ಯಾಸಂಸ್ಥೆ, ಉಜಿರೆ ಇವರ ಆಶ್ರಯದಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಂತರ್ ಪಾಲಿಟೆಕ್ನಿಕ್ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ ನಡೆಯಿತು.

ಈ ಪಂದ್ಯಾಟದಲ್ಲಿ ಎಸ್.ಎನ್. ಮೂಡುಬಿದಿರೆ ಪಾಲಿಟೆಕ್ನಿಕ್ ಸಂಸ್ಥೆಯ ತಂಡವು ಉತ್ತಮ ಪ್ರದರ್ಶನ ನೀಡಿ ತೃತೀಯ ರನ್ನರ್ ಅಪ್ (2nd Runner-up) ಪ್ರಶಸ್ತಿಯನ್ನು ಪಡೆದುಕೊಂಡಿತು.

ತಂಡಕ್ಕೆ ರಾಷ್ಟ್ರೀಯ ಕಬಡ್ಡಿ ತರಬೇತುದಾರ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರಾದ ಭಾಸ್ಕರ ಪಾಲಡ್ಕ ಅವರು ತರಬೇತಿ ನೀಡಿದ್ದು, ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಸಂಸ್ಥೆಗೆ ಕೀರ್ತಿ ತಂದಿದ್ದಾರೆ.

ತಂಡದ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.