ನಾಪತ್ತೆಯಾಗಿದ್ದ ಯುವಕ ಕಾಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

0
5

ಸವಣೂರು : ಸವಣೂರು ಸಮೀಪದ ಪರಣೆ ಎಂಬಲ್ಲಿ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಯುವಕನೋರ್ವ ಸ್ಥಳೀಯ ಕಾಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ.

ಪರಣೆಯ ನಿವಾಸಿ ಸುರೇಶ್ ಪೂಜಾರಿ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇವರು ನಾಲ್ಕು ದಿನಗಳ ಹಿಂದೆ ಯಾರಿಗೂ ಮಾಹಿತಿ ನೀಡದೆ ಮನೆಯಿಂದ ತೆರಳಿದ್ದು, ಬಳಿಕ ನಾಪತ್ತೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಸುರೇಶ್ ಪೂಜಾರಿ ಅವರ ಮನೆಯವರು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು.

ಇದೀಗ ಸ್ಥಳೀಯ ಕಾಡಿನಲ್ಲಿ ಸುರೇಶ್ ಪೂಜಾರಿ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅವರ ಸಾವಿನ ಸುದ್ದಿ ತಿಳಿದುಬಂದಿದೆ. ಘಟನೆಯ ಹಿಂದಿನ ಕಾರಣಗಳು ಇನ್ನಷ್ಟೇ ತಿಳಿದುಬರಬೇಕಿದ್ದು, ಪೊಲೀಸರು ತನಿಖೆ ನಡೆಸಿದ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗುವ ನಿರೀಕ್ಷೆಯಿದೆ.